ನಿಡ್ಲೆ: ಖಾಸಗಿ ಬಸ್‌-ಕೆ.ಎಸ್‌.ಆರ್‌.ಟಿ.ಸಿ ಬಸ್‌ ನಡುವೆ ಮುಖಾಮುಖಿ ಡಿಕ್ಕಿ

Share the Article

ನಿಡ್ಲೆ: ಕುದ್ರಾಯ ಕ್ರಾಸ್‌ ಬಳಿ ಖಾಸಗಿ ಬಸ್‌ ಹಾಗೂ ಕೆಎಸ್‌ಆರ್‌ಟಿಸಿ ಬಸ್‌ ಮುಖಾಮುಖಿ ಡಿಕ್ಕಿಯಾದ ಘಟನೆ ಇಂದು (ಡಿ15) ರಂದು ಮುಂಜಾನೆ ನಡೆದಿರುವ ಕುರಿತು ವರದಿಯಾಗಿದೆ.

ಹಾಸನದಿಂದ ಧರ್ಮಸ್ಥಳ ಕಡೆಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಧರ್ಮಸ್ಥಳ ಕಡೆಯಿಂದ ಕೊಕ್ಕಡ ಕಡೆ ಹೋಗುತ್ತಿದ್ದ ಅಯ್ಯಪ್ಪ ಮಾಲಾಧಾರಿಗಳು ಇದ್ದ ಖಾಸಗಿ ಬಸ್‌ ಡಿಕ್ಕಿ ಹೊಡೆದಿದೆ. ಪ್ರಯಾಣಿಕರಿಗೆ ಹಾಗೂ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದೆ.

ಈ ಘಟನೆಯಿಂದ ಸಂಚಾರ ವ್ಯವಸ್ಥೆಯಲ್ಲಿ ಒಂದು ಗಂಟೆಗಳ ಕಾಲ ವ್ಯತ್ಯಾಸಗಳು ಕಂಡು ಬಂದಿದೆ. ಸಂಚಾರ ವ್ಯವಸ್ಥೆ ಸದ್ಯಕ್ಕೆ ಸರಿಯಾಗಿದೆ ಎಂದು ವರದಿಯಾಗಿದೆ.

Comments are closed.