Gruhalakshmi : ಗೃಹಲಕ್ಷ್ಮಿ ದುಡ್ಡು ಪಡೆಯುವ ಮಹಿಳೆಯರಲ್ಲಿ 1.8 ಲಕ್ಷ ಮಂದಿ ತೆರಿಗೆ ಪಾವತಿದಾರರು – ಸರ್ಕಾರದಿಂದ ಮಾಹಿತಿ

Gruhalakshmi : ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳ ಪೈಕಿ ಗೃಹಲಕ್ಷ್ಮಿ ಯೋಜನೆಯ ಪ್ರಮುಖವಾದದ್ದು. ಮಹಿಳೆಯರ ಸಬಲೀಕರಣಕ್ಕಾಗಿ ಬಡ ಹಾಗೂ ಮಧ್ಯಮ ವರ್ಗದ ಮಹಿಳೆಯರಿಗೆ ಸರ್ಕಾರ ಪ್ರತಿ ತಿಂಗಳು ಉಚಿತವಾಗಿ 2 ಸಾವಿರ ರೂಪಾಯಿ ಹಣವನ್ನು ನೀಡುತ್ತಿದೆ. ಆದರೆ ಅನೇಕ ಅನರ್ಹ ಮಹಿಳೆಯರು ಕೂಡ ಇದರ ಫಲಾನುಭವಿಗಳಾಗಿದ್ದಾರೆ. ಇದೀಗ ಈ ಕುರಿತು ಸರ್ಕಾರ ಮಾಹಿತಿ ಹಂಚಿಕೊಂಡಿದೆ.

ಹೌದು, ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆ ಲಾಭ ಪಡೆಯುತ್ತಿರುವ ಫಲಾನುಭವಿಗಳ ಪೈಕಿ 1.80 ಲಕ್ಷ ಮಂದಿ ಆದಾಯ ತೆರಿಗೆ ಪಾವತಿದಾರರಾಗಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ವಿಧಾನ ಪರಿಷತ್ತಿನಲ್ಲಿ ಈ ವಿಚಾರ ಚರ್ಚೆಗೆ ಬಂದಿದ್ದು, ಈ ಸಂದರ್ಭದಲ್ಲಿ ಅಧಿಕಾರಿಗಳು ಮಾಹಿತಿಯನ್ನು ನೀಡಿದ್ದಾರೆ. ಸರ್ಕಾರದ ಮಾನದಂಡದ ಅನ್ವಯ ಕುಟುಂಬದ ಯಜಮಾನಿ ಅಥವಾ ಅವರ ಪತಿಯ ಐಟಿ ಅಥವಾ ಜಿಎಸ್ಟಿ ರಿಟರ್ನ್ಸ್ ಸಲ್ಲಿಸುತ್ತಿದ್ದರೆ ಅಂತವರು ಯೋಜನೆಯ ಫಲಾನುಭವಿಗಳಾಗಲು ಅರ್ಹರಲ್ಲ ಎಂದು ತಿಳಿಸಲಾಗಿದೆ.
Comments are closed.