ಕಾಪು: ಪೇಟೆಯಲ್ಲಿ ಐದು ಜನರ ಮೇಲೆ ಹುಚ್ಚುನಾಯಿ ದಾಳಿ

Share the Article

ಕಾಪು: ಕಾಪು ಪುರಸಭೆ ವ್ಯಾಪ್ತಿಯ ಪೇಟೆಯಲ್ಲಿ ಬೀದಿ ನಾಯಿಗಳ ಕಾಟ ಅತಿಯಾಗಿದ್ದು ಭಾನುವಾರ ಸಂಜೆಯಿಂದ ಸೋಮವಾರ ಸಂಜೆಯ ತನಕ ಹಲವು ಮಂದಿ ಪಾದಚಾರಿಗಳು ಮತ್ತು ವಾಹನ ಸವಾರಿಗೆ ಹುಚ್ಚು ನಾಯಿ ಕಡಿದು ಗಾಯಗೊಳಿಸಿದ ಘಟನೆ ವರದಿಯಾಗಿದೆ.

ಕೇವಲ 2 ದಿನಗಳ ಅಂತರದಲ್ಲಿ ಐದು ಜನ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದಿದ್ದು, ಉಳಿದವರು ಖಾಸಗಿ ಆಸ್ಪತ್ರೆಗೆ ತೆರಳಿದ್ದಾರೆ. ಶಾಲಾ ಮಕ್ಕಳನ್ನು ಮತ್ತು ಕೂಲಿ ಕಾರ್ಮಿಕರನ್ನು ಬೀದಿ ನಾಯಿಗಳು ಅಟ್ಟಾಡಿಸಿಕೊಂಡು ಹೋಗುತ್ತಿದ್ದು ಆತಂಕಕ್ಕೆ ಕಾರಣವಾಗಿದೆ.

ಸೋಮವಾರ ಸಂಜೆ ಪುರಸಭಾಧ್ಯಕ್ಷೆ ಹರಿಣಾಕ್ಷಿಯವರ ಕಣ್ಣೆದುರಿನಲ್ಲೇ ಸಾರ್ವಜನಿಕರಿಗೆ ಹುಚ್ಚು ನಾಯಿ ಕಡಿದಿದ್ದು ಅವರು ಹುಚ್ಚು ನಾಯಿಯನ್ನು ಸೆರೆಹಿಡಿಯಲು ತತ್ ಕ್ಷಣ ಕ್ರಮ ಕೈಗೊಳ್ಳುವಂತೆ ಪುರಸಭೆಗೆ ಸೂಚನೆ ನೀಡಿದ್ದಾರೆ. ಸಾರ್ವಜನಿಕರು ಮತ್ತು ಪುರಸಭೆ ಅಧಿಕಾರಿಗಳು ನಾಯಿಯನ್ನು ಪತ್ತೆ ಹಚ್ಚಿ ಸೆರೆ ಹಿಡಿಯಲು ಪ್ರಯತ್ನಿಸಿದರೂ ನಾಯಿ ತಪ್ಪಿಸಿಕೊಂಡು ಓಡಿದೆ. ಹಾಗಾಗಿ ಆತಂಕ ಮುಂದುವರೆದಿದೆ.

Comments are closed.