SIT: ಪ್ರಜ್ವಲ್ ರೇವಣ್ಣ ಕೇಸ್ ತನಿಖೆಗೆ ಇದುವರೆಗೂ ಸರ್ಕಾರದಿಂದ ಖರ್ಚಾಗಿದ್ದೆಷ್ಟು ಕೋಟಿ?

SIT : ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಗಂಭೀರ ಅತ್ಯಾಚಾರ ಪ್ರಕರಣ ಸಾಭೀತಾಗಿದ್ದು, ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ಮತ್ತು 11.5ಲಕ್ಷ ರೂ ದಂಡವನ್ನು ವಿಧಿಸಿತ್ತು. ಬಳಿಕ ಪ್ರಜ್ವಲ್ ರೇವಣ್ಣ ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಶಿಕ್ಷೆಯನ್ನು ಅಮಾನತುಗೊಳಿಸಿ ಜಾಮೀನು ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದ ಮನವಿಯನ್ನು ಕೂಡ ಹೈಕೋರ್ಟ್ ವಿಭಾಗೀಯ ಪೀಠವು ವಜಾಗೊಳಿಸಿತ್ತು. ಇದರ ಬೆನ್ನಲ್ಲೇ ಇದೀಗ ಪ್ರಜ್ವಲ್ ರೇವಣ್ಣ ಕೇಸ್ ತನಿಖೆಗೆ ಸರ್ಕಾರ ಇದುವರೆಗೂ ಎಷ್ಟು ಹಣವನ್ನು ಖರ್ಚು ಮಾಡಿದೆ ಎಂಬ ವಿಚಾರ ಮುನ್ನಲೆಗೆ ಬಂದಿದೆ.

ಗೃಹ ಸಚಿವ ಜಿ. ಪರಮೇಶ್ವರ ಅವರು ವಿಧಾನಸಭೆಗೆ ನೀಡಿದ ಮಾಹಿತಿಯ ಪ್ರಕಾರ, ಪ್ರಜ್ವಲ್ ಪ್ರಕರಣಕ್ಕೆ, ವಿಶೇಷವಾಗಿ ಪ್ರಾಸಿಕ್ಯೂಷನ್‌ಗೆ ಸರ್ಕಾರ 3.31 ಕೋಟಿ ರೂಪಾಯಿಗಳನ್ನು ಖರ್ಚು ಮಾಡಿದೆ. ಪ್ರಜ್ವಲ್ ಪ್ರಕರಣದಲ್ಲಿ ವಿಶೇಷ ಸಾರ್ವಜನಿಕ ಅಭಿಯೋಜಕರಾಗಿದ್ದ ಮಾಜಿ ಅಡ್ವೊಕೇಟ್ ಜನರಲ್ ರವಿವರ್ಮ ಕುಮಾರ್ ಅವರಿಗೆ ಶುಲ್ಕವಾಗಿ 2.41 ಕೋಟಿ ರೂ.ಗಳನ್ನು ಪಾವತಿಸಲಾಗಿದೆ.
ಹಿರಿಯ ವಕೀಲ ಕಪಿಲ್ ಸಿಬಲ್ ಅವರಿಗೆ ಒಂದೇ ಬಾರಿಗೆ ಹಾಜರಾಗಲು 15.5 ಲಕ್ಷ ರೂಪಾಯಿ ಶುಲ್ಕವನ್ನು ಪಾವತಿಸಲಾಗಿದೆ. ಪ್ರಜ್ವಲ್ ಪ್ರಕರಣದಲ್ಲಿ ವಕೀಲರಾದ ಬಿ.ಎನ್. ಜಗದೀಶ ಮತ್ತು ಅಶೋಕ್ ಎನ್. ನಾಯಕ್ ಅವರಿಗೆ ಸರ್ಕಾರ 41.07 ಲಕ್ಷ ರೂಪಾಯಿಗಳನ್ನು ಪಾವತಿಸಿದೆ.
ಮೇ 2023 ರಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ 7 ಎಸ್‌ಐಟಿಗಳನ್ನು ರಚಿಸಿದೆ. ಸರ್ಕಾರವು ಬಿಟ್‌ಕಾಯಿನ್ ಹಗರಣ, ಸಬ್-ಇನ್‌ಸ್ಪೆಕ್ಟರ್‌ಗಳ (ಪಿಎಸ್‌ಐ) ನೇಮಕಾತಿಯಲ್ಲಿನ ಭ್ರಷ್ಟಾಚಾರ, ಪ್ರಜ್ವಲ್ ವಿರುದ್ಧದ ಕೇಸ್, ಮಹರ್ಷಿ ವಾಲ್ಮೀಕಿ ಎಸ್‌ಟಿ ಅಭಿವೃದ್ಧಿ ನಿಗಮದಲ್ಲಿ ಹಣ ದುರುಪಯೋಗ, ಬಿಜೆಪಿ ಶಾಸಕ ಮುನಿರತ್ನ ಅವರ ಲೈಂಗಿಕ ದೌರ್ಜನ್ಯದ ಆರೋಪಗಳು, ಧರ್ಮಸ್ಥಳದಲ್ಲಿ ಕೇಸ್ ಮತ್ತು ಆಳಂದ ಮತದಾರರ ವಂಚನೆಯ ತನಿಖೆಗಾಗಿ ಎಸ್‌ಐಟಿಗಳನ್ನು ರಚಿಸಿದೆ. ಇವುಗಳಲ್ಲಿ ಎಲ್ಲ ಕೇಸ್ಗಳಿಗಿಂತಲೂ ಪ್ರಜ್ವಲ್ ರೇವಣ್ಣ ಕೇಸ್ ತನಿಖೆಯೇ ದುಬಾರಿ ಆಗಿದೆ.
Comments are closed.