Belagavi session 1: ಸದನದಲ್ಲಿ ‘ಗೃಹಲಕ್ಷ್ಮಿ’ ಹಣ ಹಂಚಿಕೆ ಎಡವಟ್ಟು ಗುಟ್ಟು ರಟ್ಟು: ಬಿಜೆಪಿ, ಜೆಡಿಎಸ್ ಸದಸ್ಯರಿಂದ ಸಭಾತ್ಯಾಗ

Belagavi session 1: ಸದನದಲ್ಲಿ ಗೃಹಲಕ್ಷ್ಮಿ ಯೋಜನೆ ಹಣ ಬಿಡುಗಡೆ ವಿಚಾರವನ್ನು ವಿಪಕ್ಷ ನಾಯಕ ಆರ್.ಅಶೋಕ್ ಪ್ರಸ್ತಾಪಿಸಿದರು. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಈ ಬಗ್ಗೆ ಸ್ಪಷ್ಟನೆ ಕೊಡಬೇಕು ಎಂದು ಆಗ್ರಹಿಸಿದರು. ಸಚಿವೆ ಮಾತನಾಡಿ, 2 ತಿಂಗಳ ಹಣ ಬಾಕಿ ಇದೆ ಎಂದು ಒಪ್ಪಿಕೊಂಡರು.

ಎರಡು ತಿಂಗಳ ಕಂತು ಬಿಡುಗಡೆ ಬಗ್ಗೆ ಸಚಿವರು ತಪ್ಪು ಉತ್ತರ ಕೊಟ್ಟಿದ್ದಾರೆ. ಅವರು ಕ್ಷಮೆ ಕೇಳಬೇಕು ಎಂದು ಆರ್.ಅಶೋಕ್ ಸದನದಲ್ಲಿ ಆಗ್ರಹಿಸಿದರು. ವಿಪಕ್ಷದವರ ಮನವೊಲಿಸಲು ಸ್ಪೀಕರ್ ಪ್ರಯತ್ನಿಸಿದರು. ಆದರೆ, ಕ್ಷಮೆಯಾಚನೆಗೆ ಬಿಜೆಪಿ ನಾಯಕರು ಪಟ್ಟು ಹಿಡಿದರು.ಈ ವೇಳೆ ಪ್ರತಿಕ್ರಿಯಿಸಿದ ಲಕ್ಷ್ಮಿ ಹೆಬ್ಬಾಳ್ಕರ್, 54 ಸಾವಿರ ರೂ. ಪ್ರತಿ ಮಹಿಳೆಯರಿಗೆ ಹಾಕಿದ್ದೀವಿ. ನಾನು ವಿಷಾದ ವ್ಯಕ್ತಪಡಿಸ್ತೇನೆ ಅಂತ ಹೇಳಿದ್ದೇನೆ ಎಂದರು.ಅಶೋಕ್ ಮಾತನಾಡಿ, ಆದರೆ ಎರಡು ತಿಂಗಳ ಕಂತು ಯಾವಾಗ ಕೊಡ್ತೀವಿ ಅಂತ ಹೇಳಿಲ್ಲ, ನಾವು ವಾಕೌಟ್ ಮಾಡ್ತೇವೆ ಎಂದು ಎಚ್ಚರಿಸಿದರು. ಸದಸ್ಯರ ಮನವೊಲಿಸಲು ಸ್ಪೀಕರ್ ಪ್ರಯತ್ನಿಸಿದರು.
Comments are closed.