ಚಿಕ್ಕಮಗಳೂರು: ಶಿವಮೊಗ್ಗ ಮೂಲದ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು

Share the Article

ಚಿಕ್ಕಮಗಳೂರು: ಯುವಜನರಲ್ಲಿ ಹೃದಯಾಘಾತದ ಸಾವಿನ ಪ್ರಮಾಣ ಮುಂದುವರಿದಿದೆ. ಎಳೆ ಹೃದಯಗಳು ಶಕ್ತಿ ಮತ್ತು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಈಗ 22 ವರ್ಷದ ವಿದ್ಯಾರ್ಥಿನಿ ಒಬ್ಬಳು ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ಚಿಕ್ಕಮಗಳೂರಿನ ಶೃಂಗೇರಿಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿ ದಿಶಾ 22 ವರ್ಷದ ಹುಡುಗಿ.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ದಿಶಾ, ಚಿಕ್ಕಮಗಳೂರಿನ ಶೃಂಗೇರಿ ಕಾಲೇಜಿನಲ್ಲಿ ಬಿಕಾಂ ಅಂತಿಮ ವರ್ಷದ ವ್ಯಾಸಂಗ ಮಾಡುತ್ತಿದ್ದಳು. ಇಂದು, ಬುಧವಾರ ಮುಂಜಾನೆ ಶೃಂಗೇರಿ ಪಟ್ಟಣದ ಬಿಸಿಎಂ ಹಾಸ್ಟೆಲ್‌ನಲ್ಲಿ ಆಕೆಗೆ ಇದ್ದಕ್ಕಿದ್ದಂತೆ ಎದೆನೋವು ಉಂಟಾಗಿ, ಕುಸಿದು ಬಿದ್ದು, ಸಾವನ್ನಪ್ಪಿದ್ದಾಳೆ.

Comments are closed.