ಕಳೆದ 3 ವರ್ಷಗಳಲ್ಲಿ 88 ಪೊಲೀಸರು ಅಪರಾಧ ಕೃತ್ಯಗಳಲ್ಲಿ ಭಾಗಿ

ಬೆಳಗಾವಿ: ರಾಜ್ಯದಲ್ಲಿ ಪೊಲೀಸ್ ಸಿಬ್ಬಂದಿಗಳೇ ದರೋಡೆ, ಕಳ್ಳತನ ಸೇರಿ ವಿವಿಧ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿರುವ ಪ್ರಕರಣಗಳು ಹೆಚ್ಚುತ್ತಿದ್ದು, ಆರಕ್ಷಕರೇ ಭಕ್ಷಕರಾಗುತ್ತಿರುವ ಆತಂಕವು ಸಾರ್ವಜನಿಕರಲ್ಲಿ ಇರುವ ಜೊತೆಗೆ, ಜನರನ್ನು ರಕ್ಷಣೆ ಮಾಡಬೇಕಾದ ಪೊಲೀಸರೇ ಅಪರಾಧ ಕೃತ್ಯಗಳಲ್ಲಿ ಭಾಗಿಯಾದರೆ ರಕ್ಷಣೆ ಹೇಗೆ ಸಾಧ್ಯ? ರಾಜ್ಯದಲ್ಲಿ ಕಳೆದ ಮೂರು ವರ್ಷಗಳಲ್ಲಿ ಒಟ್ಟು 88 ಪೊಲೀಸರು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದಾರೆ ಎಂದು ಈ ಬಗ್ಗೆ ವಿಧಾನಪರಿಷತ್‌ನಲ್ಲಿ ಸ್ವತಃ ಗೃಹ ಸಚಿವರು ಮಾಹಿತಿ ನೀಡಿದ್ದಾರೆ.

ಮೂರು ವರ್ಷಗಳಲ್ಲಿ ಒಟ್ಟು 88 ಪೊಲೀಸರು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ ಎಂದು ವಿಧಾನ ಪರಿಷತ್‌ನಲ್ಲಿ ಜೆಡಿಎಸ್ ಸದಸ್ಯರ ಪ್ರಶ್ನೆಗಳಿಗೆ ಉತ್ತರ ನೀಡುತ್ತಾ ಪರಮೇಶ್ವರ್ ಅವರು ಹೇಳಿದ್ದಾರೆ. ಅಪರಾಧ ಕೃತ್ಯಗಳಲ್ಲಿ ಭಾಗಿಯಾದ ಪೊಲೀಸರ ವಿರುದ್ಧ ಎಫ್‌ಐಆರ್ ದಾಖಲಾಗಿದೆ, ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅವರು ಈ ಸಂದರ್ಭದಲ್ಲಿ ಹೇಳಿದರು.
Comments are closed.