Assembly : ‘ಕರಾವಳಿಯವರು ಬೆಂಕಿ ಹಚ್ಚೋರು’ ಎಂದ ಭೈರತಿ ಸುರೇಶ್ – ಅಸೆಂಬ್ಲಿಯಲ್ಲಿ ಭುಗಿಲೆದ್ದ ಆಕ್ರೋಶ


Assembly : ಬೆಳಗಾವಿಯಲ್ಲಿ ಕರ್ನಾಟಕ ವಿಧಾನಸಭೆಯ ಅಧಿವೇಶನ ನಡೆಯುತ್ತಿದೆ. ಈ ಸಂದರ್ಭದಲ್ಲಿ ಸಚಿವ ಭೈರತಿ ಸುರೇಶ್ ಅವರು ಕರಾವಳಿಯವರು ಬೆಂಕಿ ಹಚ್ಚುವರು ಎಂದು ಹೇಳಿಕೆ ನೀಡಿದ್ದಾರೆ. ವಿವಾದವನ್ನು ಸೃಷ್ಟಿಸಿದೆ. ಸಚಿವರ ಈ ಹೇಳಿಕೆಗೆ ಕರಾವಳಿ ಶಾಸಕರು ಬಾರಿ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಹೌದು, ಸಚಿವ ಸುರೇಶ್ ಅವರು ಬಿಜೆಪಿ ಶಾಸಕರನ್ನು ಉದ್ದೇಶಿಸಿ ನೀವು ಕರಾವಳಿಯವರು ಬೆಂಕಿ ಹಚ್ಚುವವರು’ ಎಂಬ ಹೇಳಿಕೆ ನೀಡುವ ಮೂಲಕ ಹೊಸ ವಿವಾದವನ್ನು ಸೃಷ್ಟಿಸಿದ್ದು, ಇದು ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ಭಾರೀ ವಾಕ್ಸಮರಕ್ಕೆ ಕಾರಣವಾಯಿತು. ಕರಾವಳಿ ಭಾಗದ ಬಿಜೆಪಿ ಶಾಸಕರು ಸಚಿವರ ವಿರುದ್ಧ ತಿರುಗಿಬಿದ್ದು, ಕ್ಷಮೆಯಾಚನೆಗೆ ಪಟ್ಟು ಹಿಡಿದ ಘಟನೆ ಕಲಾಪದ ದಿಕ್ಕನ್ನೇ ಬದಲಿಸಿತು.
ಈ ಮಾತಿನಿಂದ ಕೆರಳಿದ ಬಿಜೆಪಿ ಶಾಸಕರಾದ ಸುನಿಲ್ ಕುಮಾರ್, ವೇದವ್ಯಾಸ ಕಾಮತ್ ಮತ್ತು ಚನ್ನಬಸಪ್ಪ ಅವರು ಸಚಿವರ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದರು. ಬಳಿಕ ಸುನಿಲ್ ಕುಮಾರ್ ಅವರು ಸಭಾಧ್ಯಕ್ಷ ಯು.ಟಿ. ಖಾದರ್ ಅವರನ್ನೇ ಪ್ರಶ್ನಿಸಿ, ‘ನೀವೂ ಕರಾವಳಿಯವರಲ್ಲವೇ? ಸಚಿವರು ಇಡೀ ಕರಾವಳಿಗೆ ಬೆಂಕಿ ಹಚ್ಚುವವರು ಎಂದು ಹಣೆಪಟ್ಟಿ ಕಟ್ಟುತ್ತಿದ್ದರೂ ನೀವು ಸುಮ್ಮನೆ ಕುಳಿತಿದ್ದೀರಲ್ಲಾ? ಪೀಠದಿಂದ ಹೊರಗೆ ಬನ್ನಿ’ ಎಂದು ಸವಾಲು ಹಾಕಿದರು.

Comments are closed.