Glanders Disease: ಕುದುರೆಗಳಲ್ಲಿ ಗ್ಲಾಂಡರ್ಸ್ ರೋಗ; ಬೆಂಗಳೂರು ಟರ್ಫ್ ಕ್ಲಬ್‌ ನಲ್ಲಿ ಪ್ರಾಣಿ ಚಲನವಲನಕ್ಕೆ ನಿರ್ಬಂಧ

Share the Article

Glanders Disease: ಕುದುರೆಗಳಲ್ಲಿ ಗ್ಲಾಂಡರ್ಸ್ ರೋಗ (Glanders Disease) ಕಂಡುಬಂದಿದ್ದು, ಬೆಂಗಳೂರು ಟರ್ಫ್ ಕ್ಲಬ್‌ನ (Turf Club) ಸುತ್ತಲಿನ 2 ಕಿ.ಮೀ ವ್ಯಾಪ್ತಿಯಲ್ಲಿ ಕುದುರೆ, ಕತ್ತೆ, ಹೇಸರಗತ್ತೆ ಪ್ರಾಣಿಗಳ ಚಲನವಲನಕ್ಕೆ ನಿರ್ಬಂಧ ವಿಧಿಸಲಾಗಿದೆ.

ಟರ್ಪ್ ಕ್ಲಬ್ ಸುತ್ತಮುತ್ತ ಗ್ಲಾಂಡರ್ಸ್ ರೋಗ ಪೀಡಿತ ಪ್ರದೇಶವೆಂದು ಘೋಷಿಸಿರುವ ಭಾಗದಲ್ಲಿ ಕುದುರೆ ಮತ್ತು ಕುದುರೆ ಜಾತಿಗೆ ಸೇರಿದ ಪ್ರಾಣಿಗಳ ಚಲನವಲನ ನಿರ್ಬಂಧಿಸಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಜಗದೀಶ ಆದೇಶ ಹೊರಡಿಸಿದ್ದಾರೆ. ಬೆಂಗಳೂರು ಟರ್ಫ್ ಕ್ಲಬ್‌ನಲ್ಲಿರುವ ಕುದುರೆಗಳಲ್ಲಿ ಗ್ಲಾಂಡರ್ಸ್ ರೋಗ ದೃಢಪಟ್ಟಿದೆ.

ಪ್ರಾಣಿಗಳಲ್ಲಿ ಸೋಂಕುಕಾರಕ ಮತ್ತು ಸಾಂಕ್ರಾಮಿಕ ರೋಗಗಳ ಪ್ರತಿಭಂದಕ ಮತ್ತು ನಿಯಂತ್ರಣ ಅಧಿನಿಯಮ 2009 ರ ಕಾಲಂ-6 ರಡಿ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಬೆಂಗಳೂರು ಟರ್ಫ್ ಕ್ಲಬ್ ಅನ್ನು ಗ್ಲಾಂಡರ್ಸ್ ಕೇಂದ್ರೀಕೃತ ಸ್ಥಳ (Epic Centre) ಎಂದು ಗುರುತಿಸಲಾಗಿದೆ.

ಬೆಂಗಳೂರು ಟರ್ಫ್ ಕ್ಲಬ್‌ನ ಸುತ್ತಲಿನ 2 ಕಿ.ಮೀ ವ್ಯಾಪ್ತಿಯಲ್ಲಿ ಕುದುರೆ ಕತ್ತೆ, ಹೇಸರಗತ್ತೆ ಪ್ರಾಣಿಗಳ ಚಲನವನ ಹಾಗೂ ಪ್ರಾಣಿಗಳ ಮನೋರಂಜನೆ ಮೆರವಣೆಗೆ ಶುಭಕಾರ್ಯಗಳು ನಿರ್ಬಂಧ ವಿಧಿಸಲಾಗಿದೆ.

ಏನಿದು ಗ್ಲಾಂಡರ್ಸ್ ರೋಗ?

ಗ್ಲಾಂಡರ್ಸ್ ಒಂದು ಸಾಂಕ್ರಾಮಿಕ ಮತ್ತು ಮಾರಣಾಂತಿಕ ಕಾಯಿಲೆಯಾಗಿದೆ. ಕುದುರೆಗಳು, ಕತ್ತೆಗಳು ಮತ್ತು ಹೇಸರಗತ್ತೆಗಳಿಗೆ ಸೋಂಕು ತರುತ್ತದೆ. ಇದು ಬರ್ಖೋಲ್ಡೆರಿಯಾ ಮಲ್ಲಿ ಎಂಬ ಬ್ಯಾಕ್ಟೀರಿಯದಿಂದ ಉಂಟಾಗುತ್ತದೆ. ಶ್ವಾಸನಾಳ ಮತ್ತು ಶ್ವಾಸಕೋಶಗಳಲ್ಲಿ, ಪ್ರತ್ಯೇತ ಪ್ರಕರಣಗಳಲ್ಲಿ ಗಂಟುಗಳು ಮತ್ತು ಹುಣ್ಣುಗಳನ್ನು ಉಂಟುಮಾಡುತ್ತದೆ. ಉಲ್ಬಣವಾದರೆ ಸಾವು ಕೂಡ ಸಂಭವಿಸುತ್ತದೆ. ಈ ಗ್ಲಾಂಡರ್ಸ್ ರೋಗ, ಮನುಷ್ಯರಿಗೂ ಹರಡುವ ಸಾಧ್ಯತೆ ಇದೆ. ಸಾಮಾನ್ಯವಾಗಿ ಸೋಂಕು ಪೀಡಿತ ಪ್ರಾಣಿಯ ಸಂಪರ್ಕಕ್ಕೆ ಬರುವ ಪ್ರಾಣಿ ನಿರ್ವಾಹಕರು ಅಥವಾ ಅಕ್ಕಪಕ್ಕದವರು ಸೋಂಕಿಗೆ ತುತ್ತಾಗುವ ಅಪಾಯವಿದೆ‌.

Comments are closed.