ರಾಜ್ಯಾದ್ಯಂತ 21 ರಿಂದ ಪಲ್ಸ್‌ ಪೋಲಿಯೋ

Share the Article

ಡಿ.18: ರಾಜ್ಯಾದ್ಯಂತ ಇದೇ ತಿಂಗಳ 21 ರಿಂದ ಮೂರು ದಿನಗಳ ಕಾಲ ಪಲ್ಸ್‌ ಪೋಲಿಯೋ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗುತ್ತಿದ್ದು, ಐದು ವರ್ಷದೊಳಗಿನ ಮಕ್ಕಳಿಗೆ ಪೊಲಿಯೋ ಹನಿ ಹಾನಿಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‌ ಗುಂಡೂರಾವ್‌ ಮನವಿ ಮಾಡಿದ್ದಾರೆ.

ರಾಜ್ಯದ ಎಲ್ಲಾ ಸರಕಾರಿ ಆಸ್ಪತ್ರೆಗಳು, ಶಾಲೆ, ಕಾಲೇಜು, ಬಸ್‌, ರೈಲ್ವೆ ನಿಲ್ದಾಣ ಸೇರಿದಂತೆ ಸಾರ್ವಜನಿಕ ಆರೋಗ್ಯ ಕಾರ್ಯಕರ್ತರು ಪೊಲಿಯೋ ಲಸಿಕೆ ಹಾಕಲಿದ್ದಾರೆ. ಪೋಷಕರು ತಮ್ಮ ಐದು ವರ್ಷದೊಳಗಿನ ಮಕ್ಕಳಿಗೆ ಹಿಂದೆ ಎಷ್ಟೇ ಬಾರಿ ಪೋಲಿಯೋ ಹನಿ ಹಾಕಿಸಿದ್ದರೂ ಮತ್ತೆ ಲಸಿಕೆ ಹಾಕಲು ಮನವಿ ಮಾಡಿದರು.

Comments are closed.