3,600 ಪೊಲೀಸ್ ಹುದ್ದೆ ಭರ್ತಿ, ಆರ್ಥಿಕ ಇಲಾಖೆ ಒಪ್ಪಿಗೆ- ಗೃಹಸಚಿವ


ಬೆಳಗಾವಿ: ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 3,600 ಹುದ್ದೆ ಭರ್ತಿಗೆ ಆರ್ಥಿಕ ಇಲಾಖೆ ಒಪ್ಪಿಗೆ ನೀಡಿದ್ದು, ಶೀಘ್ರ ಅಧಿಸೂಚನೆ ಹೊರಡಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದರು.

ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್‌ನ ಜಗದೇವ್ ಗುತ್ತೇದಾರರ ಪ್ರಶ್ನೆಗೆ ಉತ್ತರಿಸಿ, ಒಳ ಮೀಸಲಾತಿ ಪ್ರಕ್ರಿಯೆ ಪೂರ್ವದಲ್ಲೇ ಅಧಿಸೂಚನೆ ಆಗಿದ್ದರಿಂದ ಈಗಾಗಲೇ 947 ಪಿಎಸ್‌ಐಗಳ ಭರ್ತಿ ಪ್ರಕ್ರಿಯೆ ಪೂರ್ಣಗೊಂಡು ಅಭ್ಯರ್ಥಿಗಳು ತರಬೇತಿಯಲ್ಲಿದ್ದಾರೆ. ಒಳಮೀಸಲು ಪ್ರಕ್ರಿಯೆ ಪೂರ್ಣವಾಗಿರುವುದರಿಂದ ಈಗ ಇಲಾಖೆಯಲ್ಲಿ ನೇಮಕಾತಿ ಪ್ರಕ್ರಿಯೆ ಚುರುಕುಗೊಂಡಿದೆ ಎಂದರು.

Comments are closed.