Supreme Court : ಮಗಳು ಬೇರೆ ಜಾತಿ, ಧರ್ಮದವನನ್ನು ಮದುವೆ ಆದರೆ ಅಪ್ಪನ ಆಸ್ತಿಯಲ್ಲಿ ಪಾಲಿಲ್ಲ – ಸುಪ್ರೀಂ ಕೋರ್ಟ್ ನಿಂದ ಮಹತ್ವದ ಆದೇಶ

Share the Article

Supreme Court : ತಂದೆಯ ಆಸೆಗೆ ವಿರುದ್ಧವಾಗಿ ಮಗಳು ಬೇರೆ ಜಾತಿ ಅಥವಾ ಧರ್ಮದವನನ್ನು ಮದುವೆಯಾದರೆ ಅವಳಿಗೆ ತಂದೆಯ ಆಸ್ತಿಯಲ್ಲಿ ಯಾವುದೇ ಪಾಲು ಸಿಗುವುದಿಲ್ಲ ಎಂಬುದಾಗಿ ಸುಪ್ರೀಂ ಕೋರ್ಟ್ ಮಹತ್ವದ ಆದೇಶವನ್ನು ನೀಡಿದೆ.

ಹೌದು, ತಂದೆಯ ಇಚ್ಛೆಗೆ ವಿರುದ್ಧವಾಗಿ ಪುತ್ರಿ ಪ್ರೀತಿಸಿ ಮದುವೆಯಾದಲ್ಲಿ ಬೇರೆ ಧರ್ಮದವರನ್ನು ವಿವಾಹವಾದಲ್ಲಿ, ತಂದೆಗೆ ನೋವುಂಟಾಗುವಂತೆ ಪುತ್ರಿ ವರ್ತಿಸಿದರೆ ಆ ತಂದೆ ತನ್ನ ಮಗಳನ್ನು ಆಸ್ತಿಯ ವಿಲ್ ನಿಂದ ಹೊರಗಿಡಬಹುದು. ಆಕೆಗೆ ತಂದೆಯ ಆಸ್ತಿಯಲ್ಲಿ ಯಾವ ಪಾಲು ಸಿಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಆದೇಶವನ್ನು ನೀಡಿದೆ.

ಕೇರಳದಲ್ಲಿ ಶ್ರೀಧರ್ ಎಂಬುವವರ ಮಗಳು ಶೈಲ ಜೋಸೆಫ್ ಎಂಬುವರು ಬೇರೆ ಧರ್ಮದವರನ್ನು ಮದುವೆಯಾಗಿದ್ದರು. ಹೀಗಾಗಿ, ಶ್ರೀಧರನ್ ತನ್ನ ಮಗಳನ್ನು ದೂರವೇ ಇಟ್ಟಿದ್ದರು. ತಮ್ಮ ವಿಲ್​ನಲ್ಲಿ ಕೂಡ ಆಕೆಗೆ ಪಾಲು ಬರೆದಿರಲಿಲ್ಲ. ಇದನ್ನು ವಿರೋಧಿಸಿ, ತನ್ನ ತಂದೆಯ ಆಸ್ತಿಯಲ್ಲಿ ತನಗೂ ಪಾಲು ಬೇಕೆಂದು ಆಕೆ ಕಾನೂನು ಮೊರೆಹೋಗಿದ್ದರು. ಕೆಳ ನ್ಯಾಯಾಲಯಗಳು ಆ ವಿಲ್ ಬಗ್ಗೆ ಅನುಮಾನಗಳನ್ನು ವ್ಯಕ್ತಪಡಿಸಿದ್ದವು. ಶೈಲಾ ಅವರಿಗೆ ಅವರ ತಂದೆಯ ಆಸ್ತಿಯಲ್ಲಿ ಅವರ ಇತರ 8 ಸಹೋದರರೊಂದಿಗೆ ಸಮಾನ ಪಾಲು ನೀಡಬೇಕೆಂದು ತೀರ್ಪು ನೀಡಿತ್ತು. ಆದರೆ, ಸುಪ್ರೀಂ ಕೋರ್ಟ್ ಕೆಳ ನ್ಯಾಯಾಲಯದ ಈ ತೀರ್ಪನ್ನು ರದ್ದುಗೊಳಿಸಿದೆ. ವಿಲ್ ಪ್ರಕಾರ ಶೈಲಾ ಅವರಿಗೆ ಅವರ ತಂದೆಯ ಆಸ್ತಿಯಲ್ಲಿ ಯಾವುದೇ ಹಕ್ಕಿಲ್ಲ ಎಂದು ತೀರ್ಪು ನೀಡಿದೆ.

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಅಶಾನುದ್ದೀನ್ ಅಮಾನುಲ್ಲಾ ಮತ್ತು ಕೆ. ವಿನೋದ್ ಚಂದ್ರನ್ ನೇತೃತ್ವದ ನ್ಯಾಯ ಪೀಠವು ಹೈಕೋರ್ಟ್ ಮತ್ತು ವಿಚಾರಣಾ ನ್ಯಾಯಾಲಯವು ಶೈಲಾ ಜೋಸೆಫ್‌ಗೆ ಅವರ ತಂದೆ ಎನ್.ಎಸ್. ಶ್ರೀಧರನ್ ಅವರ ಆಸ್ತಿಯಲ್ಲಿ ಪಾಲು ನೀಡಬೇಕು ಎಂಬ ತೀರ್ಪನ್ನು ರದ್ದುಗೊಳಿಸಿದೆ. 

ತೀರ್ಪನ್ನು ಬರೆಯುತ್ತಾ, ನ್ಯಾಯಮೂರ್ತಿ ಚಂದ್ರನ್, “ನಿಸ್ಸಂದಿಗ್ಧವಾಗಿ ಸಾಬೀತಾಗಿರುವ ವಿಲ್‌ಗೆ ಯಾವುದೇ ಹಸ್ತಕ್ಷೇಪ ಇರಬಾರದು. ಹೈಕೋರ್ಟ್ ಮತ್ತು ವಿಚಾರಣಾ ನ್ಯಾಯಾಲಯದ ತೀರ್ಪು ಮತ್ತು ತೀರ್ಪನ್ನು ರದ್ದುಗೊಳಿಸಲಾಗಿದೆ. ವಾದಿ(ಶೈಲಾ) ತನ್ನ ತಂದೆಯ ಆಸ್ತಿಗಳ ಮೇಲೆ ಯಾವುದೇ ಹಕ್ಕನ್ನು ಹೊಂದಿಲ್ಲ ಎಂದು ಕಂಡುಬಂದಿದೆ, ಇದನ್ನು ವಾದಿಯ ಇತರ ಸಹೋದರರಿಗೆ ಉಯಿಲು ಮೂಲಕ ನೀಡಲಾಗಿದೆ ಎಂದು ಹೇಳಲಾಗಿದೆ.

Comments are closed.