Belagavi: BPL ಕಾರ್ಡ್ ದಾರರಿಗೆ ಗುಡ್ ನ್ಯೂಸ್- ಆದಾಯ ಮಿತಿ ಪರಿಷ್ಕರಣೆಗೆ ಸರ್ಕಾರ ಸಿದ್ಧತೆ

Share the Article

Belagavi : ಬಿಪಿಎಲ್ ಕಾರ್ಡ್ ದಾರರಿಗೆ ಸಿಹಿ ಸುದ್ದಿ ಸಿಕ್ಕಿದ್ದು, ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಪಡೆಯಲು ಇರುವ ಆದಾಯ ಮಿತಿ ಪರಿಷ್ಕರಣೆಗೆ ಚಿಂತನೆ ನಡೆದಿದೆ ಎಂದು ಆಹಾರ ಸಚಿವ ಕೆ. ಹೆಚ್. ಮುನಿಯಪ್ಪ ತಿಳಿಸಿದ್ದಾರೆ. 

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೇಂದ್ರ ಸರ್ಕಾರ ಬಿಪಿಎಲ್ ಕಾರ್ಡ್​​ದಾರರ ಆದಾಯವನ್ನು 1.20ಲಕ್ಷ ರೂ.ಗೆ ಮಿತಿಗೊಳಿಸಿದೆ. ಕೇಂದ್ರ ಸರ್ಕಾರ ಬಿ.ಪಿ.ಎಲ್ ಕಾರ್ಡ್‍ದಾರರ ಆದಾಯ ಮಿತಿಯನ್ನು ರೂ.1.20 ಲಕ್ಷಕ್ಕೆ ಮಿತಿಗೊಳಿಸಿದೆ. ಆದರೆ ಕೂಲಿ ಕೆಲಸಗಾರರಿಗೂ ಪ್ರತಿದಿನ ರೂ.500 ಕೂಲಿ ದೊರೆಯುತ್ತದೆ. ಇದರ ಆಧಾರದಲ್ಲಿ ಕೂಲಿ ಮಾಡುವವರ ಆದಾಯವೂ ವರ್ಷಕ್ಕೆ ರೂ.1.80 ಲಕ್ಷಕ್ಕೂ ಅಧಿಕವಾಗುತ್ತಿದೆ. ಈ ಹಿನ್ನಲೆಯಲ್ಲಿ ಪರಿಷ್ಕರಿಸಲು ಚಿಂತನೆ ನಡೆದಿದೆ ಎಂದರು.

Comments are closed.