ಮೆಡಿಕಲ್ ಸೀಟು ಆಯ್ಕೆ ಬದಲಿಗೆ ಅವಕಾಶ


ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಎರಡನೇ ಸುತ್ತಿನ १९६३0 ಹಂಚಿಕೆಯಲ್ಲಿ ಭಾಗವಹಿಸಲು ಇಚ್ಚಿಸುವ ಅರ್ಹರಿಗೆ ಆಯ್ಕೆಗಳನ್ನು ಅದಲು-ಬದಲು ಮಾಡಿಕೊಳ್ಳಲು ಡಿ.22ರಂದು ಬೆಳಗ್ಗೆ 9 ಗಂಟೆವರೆಗೆ ದಿನಾಂಕ ವಿಸ್ತರಿಸಲಾಗಿದೆ. ಅಖಿಲ ಭಾರತ ಮಟ್ಟದ ಕೌನ್ಸೆಲಿಂಗ್ ದಿನಾಂಕಗಳನ್ನು ವಿಸ್ತರಿಸಿರುವ ಕಾರಣ ರಾಜ್ಯದ ಸೀಟು ಹಂಚಿಕೆ ಪ್ರಕ್ರಿಯೆ ಯಲ್ಲೂ ಬದಲಾವಣೆ ಮಾಡಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.

ಡಿ.23ರಂದು ಮಧ್ಯಾಹ್ನ 2 ಗಂಟೆ ನಂತರ ತಾತ್ಕಾಲಿಕ ಫಲಿತಾಂಶ ಪ್ರಕಟಿಸ ಲಾಗುತ್ತದೆ. ಡಿ.24ರಂದು ಮಧ್ಯಾಹ್ನ 2 ಗಂಟೆಗೆ ಅಂತಿಮ ಫಲಿತಾಂಶ ಪ್ರಕಟಿಸ ಲಾಗುತ್ತದೆ. ಡಿ.25ರಿಂದ 30ರವರೆಗೆ ಶುಲ್ಕ ಪಾವತಿಸಿ, ಕಾಲೇಜಿಗೆ ವರದಿ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ.

Comments are closed.