Bangla: ಬಾಂಗ್ಲಾದಲ್ಲಿ ಮುಂದುವರೆದ ಹಿಂಸಾಚಾರ- ಹಿಂದೂ ಯುವಕನನ್ನು ಮರಕ್ಕೆ ಕಟ್ಟಿ ಬೆಂಕಿ ಹಚ್ಚಿದ ದುಷ್ಕರ್ಮಿಗಳು!!

Share the Article

Bangla: ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲಿನ ಹಿಂಸಾಚಾರ ಮುಂದುವರೆದಿದ್ದು ಇದೀಗ ಹಿಂದೂ ಯುವಕನನ್ನು ಮರಕ್ಕೆ ಕಟ್ಟಿ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಅಘಾತಕಾರಿ ಘಟನೆ ಎಂದು ನಡೆದಿದೆ. 

ಬಾಂಗ್ಲಾದ ಭಾಲುಕಾ ಉಪಜಿಲ್ಲೆಯ ಸ್ಕ್ವೇರ್ ಮಾಸ್ಟರ್ ಬಾರಿ ದುಬಾಲಿಯಾ ಪಾರಾ ಪ್ರದೇಶದಲ್ಲಿ ಗುರುವಾರ ರಾತ್ರಿ ಹಿಂದೂ ವ್ಯಕ್ತಿಯೊಬ್ಬನನ್ನು ಥಳಿಸಿ ಕೊಂದಿರುವ ಘಟನೆ ಬಾಂಗ್ಲಾದೇಶದ ಮೈಮೆನ್ ಸಿಂಗ್ ನ ಭಲುಕಾದಲ್ಲಿ ನಡೆದಿದೆ. 

ಮೃತರನ್ನು ದೀಪು ಚಂದ್ರ ದಾಸ್ ಎಂದು ಪೊಲೀಸರು ಗುರುತಿಸಿದ್ದಾರೆ. ಅವರು ಸ್ಥಳೀಯ ಉಡುಪು ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು ಮತ್ತು ಈ ಪ್ರದೇಶದಲ್ಲಿ ಬಾಡಿಗೆದಾರರಾಗಿ ವಾಸಿಸುತ್ತಿದ್ದರು. ಗುರುವಾರ ರಾತ್ರಿ 9 ಗಂಟೆ ಸುಮಾರಿಗೆ ಆಕ್ರೋಶಗೊಂಡ ಜನಸಮೂಹವು ಪ್ರವಾದಿ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾನೆ ಎಂದು ಆರೋಪಿಸಿ ಆತನನ್ನು ಹಿಡಿದು ಹೊಡೆದು ಕೊಂದಿತು. ನಂತರ ಅವರು ಶವಕ್ಕೆ ಬೆಂಕಿ ಹಚ್ಚಿದರು ಎಂದು ಕರ್ತವ್ಯ ಅಧಿಕಾರಿ ಮಿಯಾ ಬಿಬಿಸಿ ಬಾಂಗ್ಲಾಗೆ ತಿಳಿಸಿದ್ದಾರೆ.

 ಇನ್ನು ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ. ಯುವಕನ ಶವವನ್ನು ಶವಗಾರಕ್ಕೆ ಕಳುಹಿಸಿ ಮರಣೋತ್ತರ ಪರೀಕ್ಷೆಯನ್ನು ನಡೆಸಲಾಗುತ್ತಿದೆ. ಆದರೆ ಈ ಕುರಿತು ಇದುವರೆಗೂ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂಬುದು ಆಶ್ಚರ್ಯ.

Comments are closed.