D K Shivkumar : ನೋಟಲ್ಲಿರುವ ಗಾಂಧಿ ಚಿತ್ರ ತೆಗೆಯಿರಿ -ಕೇಂದ್ರಕ್ಕೆ ಡಿಕೆಶಿ ಸವಾಲ್!!

Share the Article

D K Shivkumar : ಭಾರತದಲ್ಲಿ ಚಲಾವಣೆಯಾಗುತ್ತಿರುವ ನೋಟುಗಳಲ್ಲಿನ ಗಾಂಧಿ ಚಿತ್ರವನ್ನು ತೆಗೆಯುವಂತೆ ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕೇಂದ್ರ ಸರ್ಕಾರಕ್ಕೆ ಸವಾಲ್ ಎಸೆದಿದ್ದಾರೆ.

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ(ನರೇಗಾ) ಯೋಜನೆ ಹೆಸರು ಬದಲು ಮತ್ತು ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಕೇಂದ್ರ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ಕೆಪಿಸಿಸಿ ವತಿಯಿಂದ ಫ್ರೀಡಂ ಪಾರ್ಕ್‌ನಲ್ಲಿ ಶನಿವಾರ ‘ಸತ್ಯಮೇವ ಜಯತೇ’ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಮಾತನಾಡಿದ ಶಿವಕುಮಾರ್, ‘ಬಿಜೆಪಿಗೆ ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧಿ ಚಿತ್ರವನ್ನು ತೆಗೆಯಲಿ’ ಎಂದು ಸವಾಲು ಹಾಕಿದರು.

ಅಲ್ಲದೆ ನರೇಗಾ ಯೋಜನೆಯಿಂದ ಗಾಂಧೀಜಿ ಹೆಸರನ್ನು ತೆಗೆಯುವ ಮೂಲಕ ಮತ್ತೊಮ್ಮೆ ಅವರನ್ನು ಕೊಲ್ಲುತ್ತಿದ್ದೀರಿ. ಬಡವರಿಗೆ ಉದ್ಯೋಗ ನೀಡುವ ಯೋಜನೆಯಿಂದ ಅವರ ಹೆಸರನ್ನು ತೆಗೆಯುವ ನೀವು ದೇಶದ್ರೋಹಿಗಳು. ಗಾಂಧೀಜಿಗೆ ಅಪಮಾನ ಮಾಡಿದ ಬಿಜೆಪಿಯವರು ಗಾಂಧಿ ಪ್ರತಿಮೆ ಮುಂದೆ ನಿಂತು ಹೋರಾಟ ಮಾಡುವ ಹಕ್ಕನ್ನು ಕಳೆದುಕೊಂಡಿದ್ದಾರೆ. ಆದ್ದರಿಂದ ಇನ್ನು ಮುಂದೆ ಬಿಜೆಪಿ ನಾಯಕರು ಹಾಗೂ ಶಾಸಕರು ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ಮಾಡಬಾರದು ಎಂದು ಸವಾಲು ಹಾಕಿದರು.

Comments are closed.