ಲೈಂಗಿಕ ದೌರ್ಜನ್ಯ ಎಸಗಿದ ಸ್ವಾಮೀಜಿಗೆ 35 ವರ್ಷ ಜೈಲು

Share the Article

ಅಪ್ರಾಪ್ತ ಬಾಲಕಿಯ ಅಪಹರಣ ಮಾಡಿ ಲೈಂಗಿಕ ದೌರ್ಜನ್ಯ ಎಸಗಿದ ಅಪರಾಧಿ ರಾಯಬಾಗ ತಾಲೂಕು ಮೇಖಕ ಗ್ರಾಮದ ಹಠಯೋಗಿ ಲೋಕೇಶ್ವರ ಸ್ವಾಮೀಜಿಗೆ (ಲೋಕೇಶ್ವರ ಸಾಬಣ್ಣ ಜಂಬಗಿ) 35 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಲಾಗಿದೆ.

”ಅಪರಾಧಿಯು 1 ಲಕ್ಷ ರೂ. ದಂಡ ಪಾವತಿಸದಿದ್ದರೆ ಎರಡು ವರ್ಷಗಳ ಹೆಚ್ಚುವರಿ ಜೈಲು ಶಿಕ್ಷೆ ಅನುಭವಿಸಬೇಕು. ನೊಂದ ಬಾಲಕಿಗೆ ಜಿಲ್ಲಾ ಕಾನೂನು ಪ್ರಾಧಿಕಾರದಿಂದ 4 ಲಕ್ಷ ರೂ. ಪರಿಹಾರ ಪಾವತಿಸಬೇಕು,” ಎಂದು ನಗರದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ವಿಶೇಷ ಪೋಕ್ಸ್‌ ಕೋರ್ಟ್‌ ಆದೇಶದಲ್ಲಿ ತಿಳಿಸಿದ್ದಾರೆ.

ಪ್ರಕರಣದ ಹಿನ್ನೆಲೆ
2025ರ ಮೇ ತಿಂಗಳಲ್ಲಿ ಅಪ್ರಾಪ್ತ ಯನ್ನು ಕಾರಿನಲ್ಲಿ ಅಪಹರಿಸಿದ್ದ ಜಿಲ್ಲೆ ಚಿತ್ತಾಪುರ ಕಲಬುರಗಿ ಮೂಲದ ಸ್ವಾಮೀಜಿ ಆಂಧ್ರಪ್ರದೇಶದ ಮಂತ್ರಾಲಯಕ್ಕೆ ಕರೆದೊಯ್ದಿದ್ದ. ಲಾಡ್ಜ್‌ನಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದ. ಈ ವಿಷಯ ವನ್ನು ಯಾರಿಗಾದರೂ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ ಕುರಿತು ಮೂಡಲಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Comments are closed.