ಬೆಳ್ತಂಗಡಿ : ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿದ ಕಳ್ಳರು | ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

Share the Article

ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿದ ಕಳ್ಳರು ಮನೆಯಲ್ಲಿದ್ದ ಚಿನ್ನಾಭರಣಗಳನ್ನು ದೋಚಿದ ಘಟನೆ ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ಮಲೆಬೆಟ್ಟು ಎಂಬಲ್ಲಿ ನಡೆದಿದೆ.

ಮಲೆಬೆಟ್ಟು ನಿವಾಸಿ ವಿಶ್ವನಾಥ ಗೌಡ ಎಂಬವರ ಮನೆಯಲ್ಲಿ ಈ ಕೃತ್ಯ ನಡೆದಿದೆ.

ಮನೆಯವರು ಕೆಲಸದ ನಿಮಿತ್ತ ಹೊರ ಹೋಗಿದ್ದ ವೇಳೆ ಮನೆಯ ಬೀಗ ಒಡೆದು ಮನೆಗೆ ನುಗ್ಗಿ ಕಪಾಟಿನಲ್ಲಿ ಇರಿಸಲಾಗಿದ್ದ 42 ಗ್ರಾಂ ತೂಕದ 1.26 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ಹಾಗೂ 500 ರೂ. ನಗದನ್ನು ಅಪಹರಿಸಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave A Reply