ಪಠಾಣ್ ಕೋಟ್ ಸೇನಾ ಗೇಟ್ ನಲ್ಲಿ ಇಂದು ಮುಂಜಾನೆ ಗ್ರೇನೇಡ್ ಸ್ಫೋಟ!! | ಚೆಕ್ ಪೋಸ್ಟ್ ಗಳಲ್ಲಿ ಹೈ ಅಲರ್ಟ್ ಘೋಷಣೆ

Share the Article

ಪಂಜಾಬ್​​: ಪಠಾಣ್‌ಕೋಟ್‌ನ ಧೀರಪುಲ್ ಬಳಿಯ ಭಾರತೀಯ ಸೇನೆಯ ತ್ರಿವೇಣಿ ಗೇಟ್‌ನಲ್ಲಿ ಸೋಮವಾರ ಮುಂಜಾನೆ ಗ್ರೆನೇಡ್ ಸ್ಫೋಟ ಸಂಭವಿಸಿದೆ ಎಂದು ರಕ್ಷಣಾ ಮೂಲಗಳು ತಿಳಿಸಿವೆ.

ಮೂಲಗಳ ಪ್ರಕಾರ, ಸ್ಫೋಟ ಸಂಭವಿಸಿರುವ ಸ್ಥಳದಲ್ಲಿ ಮದುವೆ ಮೆರವಣಿಗೆ ಸಾಗುತ್ತಿದ್ದಾಗ ಬೈಕ್‌ನಲ್ಲಿ ಬಂದ ಅಪರಿಚಿತ ವ್ಯಕ್ತಿಗಳು ಗೇಟ್ ಬಳಿ ಗ್ರೆನೇಡ್ ಎಸೆದು ಪರಾರಿಯಾಗಿದ್ದಾರೆಂದು ತಿಳಿದುಬಂದಿದ್ದು,ಘಟನೆ ಬಳಿಕ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಸ್ಥಳದಲ್ಲಿರುವ ಎಲ್ಲಾ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ.

ಈ ನಡುವೆ ಪಠಾಣ್‌ಕೋಟ್‌ನ ಎಲ್ಲಾ ಪೊಲೀಸ್ ಚೆಕ್‌ಪೋಸ್ಟ್‌ಗಳಲ್ಲಿಯೂ ಹೈ ಅಲರ್ಟ್ ಘೋಷಣೆ ಮಾಡಲಾಗಿದ್ದು,ಘಟನೆಯಲ್ಲಿ ಯಾವುದೇ ಗಾಯಗಳು ವರದಿಯಾಗಿಲ್ಲ.ಸ್ಥಳಕ್ಕೆ ಧಾವಿಸಿರುವ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿದ್ದ ಗ್ರೆನೇಡ್‌ನ ಭಾಗಗಳನ್ನು ವಶಪಡಿಸಿಕೊಂಡಿದ್ದಾರೆಂದು ವರದಿಗಳು ತಿಳಿಸಿವೆ.

Leave A Reply