ಮಂಗಳೂರು ವಿ.ವಿ.ಸ್ನಾತಕೋತ್ತರ ಪದವಿ: ಅರ್ಜಿ ಸಲ್ಲಿಕೆ ನ.30ರವರೆಗೆ ವಿಸ್ತರಣೆ

Share the Article

ಮಂಗಳೂರು : ಮಂಗಳೂರು ವಿಶ್ವ ವಿದ್ಯಾಲಯದ ಸ್ನಾತಕೋತ್ತರ ವಿಭಾಗಗಳು ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು, ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು, ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು, ಮಡಿಕೇರಿ/ ಸ್ನಾತಕೋತ್ತರ ಕೇಂದ್ರ ಚಿಕ್ಕ ಅಳುವಾರ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಸಂಯೋಜಿತ ಕಾಲೇಜುಗಳು (ಸರಕಾರಿ ಕೋಟಾ ಸೀಟುಗಳಿಗೆ) ಮತ್ತು ಸರಕಾರಿ ಕಾಲೇಜುಗಳಲ್ಲಿ ನಡೆಸಲ್ಪಡುವ ವಿವಿಧ ಸ್ನಾತಕೋತ್ತರ ಪಿಜಿ ಡಿಪ್ಲೊಮಾ ಮತ್ತು ಸರ್ಟಿಫಿಕೆಟ್ ಕಾರ್ಯಕ್ರಮಗಳ ಪ್ರವೇಶಾತಿಗೆ ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸುವ ಕೊನೆಯ ದಿನಾಂಕವನ್ನು ನ.23ರಿಂದ ನ. 30ರ ವರೆಗೆ ವಿಸ್ತರಿಸಲಾಗಿದೆ.

ಹೆಚ್ಚಿನ ಮಾಹಿತಿಯನ್ನು ಮಂಗಳೂರು ವಿಶ್ವವಿದ್ಯಾ ನಿಲಯದ ವೆಬ್‌ಸೈಟ್ www.mangaloreuniversity.ac.in ನಲ್ಲಿ ಪಡೆಯಬಹುದು ಎಂದು ವಿಶ್ವವಿದ್ಯಾನಿಲಯದ ಪ್ರಕಟನೆ ತಿಳಿಸಿದೆ.

Leave A Reply