Home ದಕ್ಷಿಣ ಕನ್ನಡ ಪತ್ರಕರ್ತನ ಮೇಲೆ ಹಲ್ಲೆ ಪ್ರಕರಣ:|ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಮತ್ತು ಪತ್ರಕರ್ತರಿಗೆ ಸೂಕ್ತ ರಕ್ಷಣೆ...

ಪತ್ರಕರ್ತನ ಮೇಲೆ ಹಲ್ಲೆ ಪ್ರಕರಣ:|
ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಮತ್ತು ಪತ್ರಕರ್ತರಿಗೆ ಸೂಕ್ತ ರಕ್ಷಣೆ ಒದಗಿಸುವಂತೆ ಒತ್ತಾಯಿಸಿ ಕರ್ನಾಟಕ ಪತ್ರಕರ್ತರ ಸಂಘ ಪುತ್ತೂರು ತಾಲೂಕು ಘಟಕದಿಂದ ಸಹಾಯಕ ಕಮಿಷನರ್ ಮೂಲಕ ಮುಖ್ಯಮಂತ್ರಿಗೆ ಮನವಿ

Hindu neighbor gifts plot of land

Hindu neighbour gifts land to Muslim journalist

ಪುತ್ತೂರು: ಪಬ್ಲಿಕ್ ಟಿವಿ ವರದಿಗಾರರ ಸುಖಪಾಲ್ ಪೊಳಲಿ ಅವರ ಮೇಲೆ ಮಂಗಳೂರಿನಲ್ಲಿ ನಡೆದ ಹಲ್ಲೆ ಘಟನೆಯನ್ನು ಖಂಡಿಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ನ.24ರಂದು
ಕರ್ನಾಟಕ ಪತ್ರಕರ್ತರ ಸಂಘ ಪುತ್ತೂರು ತಾಲೂಕು ಘಟಕದ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಲಾಯಿತು.
ನ.22ರಂದು ಮಂಗಳೂರಿನಲ್ಲಿ ಪಬ್ಲಿಕ್ ಟಿವಿ ವರದಿಗಾರ ಸುಖಪಾಲ್ ಪೊಳಲಿ ಅವರ ಮೇಲೆ ಹಲ್ಲೆ ನಡೆದಿದ್ದು ಹಲ್ಲೆ ನಡೆಸಿದವರ ವಿರುದ್ಧ ಸೂಕ್ತ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಬೇಕು.
ಇತ್ತೀಚೆಗೆ ಪತ್ರಿಕೆ ಮತ್ತು ಟಿವಿ ಮಾಧ್ಯಮಗಳ ವರದಿಗಾರರ ಮೇಲೆ ಹಲ್ಲೆಯಂತಹ ಘಟನೆಗಳು ನಡೆಯುತ್ತಿದ್ದು ಪತ್ರಕರ್ತರಿಗೆ ಸಮಾಜದಲ್ಲಿ ನಿರ್ಭೀತಿಯಿಂದ ಕಾರ್ಯನಿರ್ವಹಿಸಲು ಕಷ್ಟಕರ ಸನ್ನಿವೇಶ ನಿರ್ಮಾಣವಾಗುತ್ತಿದೆ. ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಮತ್ತು ಪತ್ರಕರ್ತರು ನಿರ್ಭೀತಿಯಿಂದ ಕಾರ್ಯನಿರ್ವಹಿಸಲು ಅವಕಾಶ ವಾಗಬೇಕು. ಪತ್ರಕರ್ತರ ಮೇಲೆ ನಡೆಯುತ್ತಿರುವಂತಹ ಹಲ್ಲೆಗಳ ವಿಚಾರವಾಗಿ ಸರಕಾರವು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂಬುವುದು ಎಂದು ಆಗ್ರಹಿಸಿ ಮನವಿ ಸಲ್ಲಿಸಲಾಯಿತು.
ಕರ್ನಾಟಕ ಪತ್ರಕರ್ತರ ಸಂಘದ ಪುತ್ತೂರು ತಾಲೂಕು ಘಟಕದ ಅಧ್ಯಕ್ಷ ಯೂಸುಫ್ ರೆಂಜಲಾಡಿ, ಪ್ರಧಾನ ಕಾರ್ಯದರ್ಶಿ ಲಕ್ಷೀಕಾಂತ್ ರೈ ಅನಿಕೋಟೆಲ್,
ಕೋಶಾಧಿಕಾರಿ ನರೇಶ್ ಜೈನ್, ಸದಸ್ಯರಾದ ಶ್ರೀಧರ್ ರೈ ಕೊಡಂಬು, ಫಾರೂಕ್ ಶೇಕ್ ಮುಕ್ವೆ ಮನವಿ ನೀಡುವ ನಿಯೋಗದಲ್ಲಿದ್ದರು.