ಬಳ್ಪ : ಆಕಸ್ಮಿಕ ಬೆಂಕಿ ಧಗದಗನೇ ಉರಿದ ಕಾರು

Share the Article

ಕಡಬ ತಾಲೂಕಿನ ಬಳ್ಪದ ಎಡೋಣಿ ಎಂಬಲ್ಲಿ ಕಾರೊಂದು ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಸಂಪೂರ್ಣವಾಗಿ ಸುಟ್ಟು ಭಸ್ಮವಾದ ಘಟನೆ ನಡೆದಿದೆ.

ಪಂಜ ನಿವಾಸಿ ಕೇಶವ ಆಚಾರಿ ಎಂಬುವರು ತಮ್ಮ ಕಾರಿನಲ್ಲಿ ಏನೆಕಲ್ಲು ಕಡೆಯಿಂದ ಕೆಲಸ ಮುಗಿಸಿ ಬರುತ್ತಿದ್ದ ವೇಳೆ ಎಡೋಣಿ ತಲುಪುತ್ತಿದ್ದಂತೆ ಕಾರಿನ ಎಂಜಿನ್ ಭಾಗದಲ್ಲಿ ಹೊಗೆ ಕಾಣಿಸಿಕೊಂಡಿದ್ದು,ಕೇಶವ ಅವರು ತಕ್ಷಣ ಕಾರಿನಿಂದ ಇಳಿದು ಕಾರಿನ ಬೋನೆಟ್ ತೆರೆಯುವಷ್ಟರಲ್ಲಿ ಬೆಂಕಿ ಸಂಪೂರ್ಣವಾಗಿ ಆವರಿಸಿದ್ದು, ಕಾರು ಸಂಪೂರ್ಣವಾಗಿ ಹೊತ್ತಿ ಉರಿದಿದೆ.

ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ,ಇತರ ತೊಂದರೆಗಳು ಆಗಿಲ್ಲ ಎಂದು ತಿಳಿದು ಬಂದಿದೆ.

Leave A Reply