ಮಂಗಳೂರು : ಆರೋಗ್ಯ ಇಲಾಖೆಯ ಅಧಿಕಾರಿಯ ಚೆಲ್ಲಾಟ | ರತ್ನಗಂಬಳಿ ಹಾಸಿ ರಂಗಿನಾಟ ನಡೆಸಿದ ಕುಷ್ಟರೋಗ ನಿಯಂತ್ರಣಾಧಿಕಾರಿ

Share the Article

ದಕ್ಷಿಣ ಕನ್ನಡ ಜಿಲ್ಲೆಯ ಆರೋಗ್ಯ ಇಲಾಖೆಯ ಅಧಿಕಾರಿಯೊಬ್ಬನ ಕಾಮಪುರಾಣ ಇದೀಗ ಬಯಲಾಗಿದ್ದು, ಆತನ ಚೆಲ್ಲಾಟದ ವೀಡಿಯೋಗಳು ವೈರಲ್ ಆಗಿದೆ.

ಮಂಗಳೂರಿನಲ್ಲಿ ಕುಷ್ಠರೋಗ ವಿಭಾಗದ ಆರೋಗ್ಯಾಧಿಕಾರಿ ಆಗಿರುವ ಡಾ.ರತ್ನಾಕರ್ ಹಾಡಹಗಲೇ ಕಚೇರಿಯಲ್ಲಿ ಬಹಿರಂಗವಾಗಿ ಮಹಿಳಾ ಸಿಬ್ಬಂದಿ ಜೊತೆಗೆ ಚೆಲ್ಲಾಟ ಆಡುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ಇದೀಗ ಭಾರೀ ವೈರಲ್ ಆಗಿದೆ.

ಕಛೇರಿಯ 9 ಮಂದಿ ಮಹಿಳಾ ಸಿಬ್ಬಂದಿ ಜೊತೆಗೆ ರತ್ನಾಕರ್ ಅಸಭ್ಯವಾಗಿ ವರ್ತಿಸಿದ್ದಾನೆ. ತನ್ನ ತೊಡೆಯ ಓರ್ವ ಮಹಿಳೆಯನ್ನು ಕೂರಿಸಿದ್ದಾನೆ. ಮಹಿಳಾ ಸಿಬ್ಬಂದಿ ಮೂಲಕ ರತ್ನಾಕರ್ ಪಾದ ಸೇವೆ ಮಾಡಿದ್ದಾನೆ. ಇಬ್ಬಿಬ್ಬರು ಮಹಿಳಾ ಸಿಬ್ಬಂದಿಯನ್ನು ಕೂರಿಸಿಕೊಂಡು ರತ್ನಾಕರ್ ಕಛೇರಿಯಲ್ಲಿಯೇ ರಂಗಿನಾಟ ಆಡಿದ್ದಾನೆ.

ಸರ್ಕಾರಿ ವೈದ್ಯನಾಗಿರುವ ರತ್ನಾಕರ್ ಆಯುಷ್ಮಾನ್ ನೋಡೆಲ್ ಆಫೀಸರ್ ಕೂಡ ಆಗಿದ್ದಾನೆ. ಒಂದು ವೇಳೆ ರತ್ನಾಕರ್ ಜೊತೆಗೆ ಸಹಕರಿಸದ ಸಿಬ್ಬಂದಿಯನ್ನು ಕೆಲಸದಿಂದ ತೆಗೆಸುತ್ತಿದ್ದ ಅಥವಾ ಟ್ರಾನ್ಸ್ಫರ್ ಮಾಡಿಸುತ್ತಿದ್ದ. ಹೀಗೆ ಹಲವಾರು ರೀತಿಯಲ್ಲಿ ಕಿರುಕುಳ ನೀಡುತ್ತಿದ್ದ ಎಂದು ಆರೋಪ ಕೇಳಿ ಬಂದಿದೆ. ಈ ಭಯಕ್ಕೆ ಮಹಿಳಾ ಸಿಬ್ಬಂದಿ ಆತ ಹೇಳಿದಂತೆ ಕೇಳುತ್ತಿದ್ದರು.

ರತ್ನಾಕರ್ ಮಹಿಳಾ ಸಿಬ್ಬಂದಿ ಜೊತೆ ಆಗಾಗ ಟ್ರಿಪ್ ಹೋಗುತ್ತಿದ್ದ. ಈ ಸಂದರ್ಭದಲ್ಲೂ ಆತ ಅಸಭ್ಯವಾಗಿ ವರ್ತಿಸುತ್ತಿದ್ದ ಎಂಬ ಆರೋಪ ಕೇಳಿ ಬಂದಿದೆ. ರತ್ನಾಕರ ಕಿರುಕುಳದಿಂದ ನೊಂದ ಮಹಿಳೆಯರು ಆರೋಪಿ ವಿರುದ್ಧ ಕಠಿಣವಾದ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

Leave A Reply

Your email address will not be published.