Home latest ಮತಾಂತರ ಆರೋಪ : ಚರ್ಚ್‌ಗೆ ನುಗ್ಗಿದ ಹಿಂದೂ ಸಂಘಟನೆಯ ಕಾರ್ಯಕರ್ತರು

ಮತಾಂತರ ಆರೋಪ : ಚರ್ಚ್‌ಗೆ ನುಗ್ಗಿದ ಹಿಂದೂ ಸಂಘಟನೆಯ ಕಾರ್ಯಕರ್ತರು

Hindu neighbor gifts plot of land

Hindu neighbour gifts land to Muslim journalist

ಹಾಸನ : ಮತಾಂತರ ನಡೆಸಲಾಗುತ್ತಿದೆ ಎಂದು ಆರೋಪಿಸಿ ಸಂಘಪರಿವಾರದ ಕಾರ್ಯಕರ್ತರು ಚರ್ಚಿಗೆ ನುಗ್ಗಿ ಪ್ರಾರ್ಥನೆಗೆ ಅಡ್ಡಿಪಡಿಸಿದ ಘಟನೆ ಬೇಲೂರು ಪಟ್ಟಣದ ಬಿಕ್ಕೋಡು ಎಂಬಲ್ಲಿ ನಡೆದಿದೆ.

ಬಿಕ್ಕೋಡು ಚರ್ಚ್ ನಲ್ಲಿ ರವಿವಾರ ಬೆಳಗ್ಗೆ ವಿಶೇಷ ಪೂಜೆ ನಡೆಯುತ್ತಿತ್ತು. ಈ ವೇಳೆ ಆಗಮಿಸಿದ ಸಂಘಪರಿವಾರದ ಕಾರ್ಯಕರ್ತರು ಇಲ್ಲಿ ಮತಾಂತರ ನಡೆಯುತ್ತಿದೆ ಎಂದು ಆರೋಪಿಸಿ ಘೋಷಣೆಗಳನ್ನು ಕೂಗಿ ಪ್ರಾರ್ಥನೆಗೆ ಅಡ್ಡಿಪಡಿಸಿದರೆನ್ನಲಾಗಿದೆ.

ಈ ವೇಳೆ ಉಭಯ ಕಡೆಯವರ ನಡುವೆ ಮಾತಿಕ ಚಕಮಕಿ ನಡೆದು ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿದರು.

‘ಚರ್ಚ್‌ನಲ್ಲಿ ಯಾವುದೇ ರೀತಿಯ ಮತಾಂತರ ನಡೆಯುತ್ತಿಲ್ಲ. ಪ್ರಾರ್ಥನೆ ಮಾಡುತ್ತಿರುವಾಗ ಕೆಲವರು ಏಕಾಏಕಿ ಒಳಗೆ ನುಗ್ಗಿ ಭಯದ ವಾತಾವರಣ ಸೃಷ್ಟಿಸಿದರು’ಎಂದು ಚರ್ಚ್ ವ್ಯವಸ್ಥಾಪಕ ಸುರೇಶ್ ಪಾಲ್‌ ಹೇಳಿದ್ದಾರೆ.

ಸಂಘ ಪರಿವಾರದವರು ಚರ್ಚ್‌ನಲ್ಲಿ ಮತಾಂತರ ನಡೆಸುತ್ತಿದ್ದಾರೆ ಎಂದು ಆಪಾದಿಸಿದ್ದಾರೆ.