ಮಂಗಳೂರು: ಮೀನುಗಾರಿಕಾ ಬೋಟ್ ನಿಂದ ಆಯತಪ್ಪಿ ಬಿದ್ದು ಕಾರ್ಮಿಕ ಸಾವು

Share the Article

ಮೀನುಗಾರಿಕೆಗೆ ತೆರಳಿದ್ದ ಸಂದರ್ಭದಲ್ಲಿ ಮೀನುಗಾರಿಕಾ ಬೋಟ್ ನಿಂದ ಆಯತಪ್ಪಿ ಬಿದ್ದು ಕಾರ್ಮಿಕನೋರ್ವ ಮೃತಪಟ್ಟ ಘಟನೆ ಮಂಗಳೂರಿನ ಬಂದರ್ ದಕ್ಕೆಯಲ್ಲಿ ನಿನ್ನೆ ನಡೆದಿದೆ.

ಮೃತ ಮೀನುಗಾರನನ್ನು ಆಂಧ್ರಪ್ರದೇಶ ಮೂಲದ ಮಲ್ಲಪಲ್ಲಿ ಅಪ್ಪಯ್ಯ (36) ಎಂದು ಗುರುತಿಸಲಾಗಿದೆ.

ಮಂಗಳವಾರ ಸಂಜೆ ಬೋಟಿನಲ್ಲಿ ಮೀನುಗಾರಿಕೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ನದಿಗೆ ಬಿದ್ದಿದ್ದಾರೆ ಎನ್ನಲಾಗಿದೆ. ಎಷ್ಟೇ ಹುಡುಕಾಡಿದರೂ ಪತ್ತೆಯಾಗಿರಲಿಲ್ಲ.

ಇಂದು ಬೆಳಗ್ಗೆ ಮಲ್ಲಪಲ್ಲಿ ಅಪ್ಪಯ್ಯ ಅವರ ಮೃತದೇಹ ಬಂದರ್ ದಕ್ಕೆಯಲ್ಲಿ ಪತ್ತೆಯಾಗಿದ್ದು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

Leave A Reply