ಸುಳ್ಯ: ನಾಪತ್ತೆಯಾದ ವ್ಯಕ್ತಿ ಅರಣ್ಯಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

Share the Article

ನಾಪತ್ತೆಯಾಗಿದ್ದ ವ್ಯಕ್ತಿಯೋರ್ವರು ಅರಣ್ಯ ಪ್ರದೇಶದಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಸುಳ್ಯದಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ಸುಳ್ಯ ತಾಲೂಕಿನ ಬಾಳಿಲದ ದೋಳೋಡಿ ರಾಮಚಂದ್ರ ಮಣಿಯಾಣಿ (51) ಎಂದು ಗುರುತಿಸಲಾಗಿದೆ.

ಭಾನುವಾರ ಮನೆಯಿಂದ ಕಾಣೆಯಾಗಿದ್ದ ಇವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪೆರುವಾಜೆ ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿದೆ. ಪೆರುವಾಜೆಯಲ್ಲಿ ಇವರ ತಮ್ಮನ ಜಾಗವಿದ್ದು ಜಾಗದ ಪಕ್ಕದ ಅರಣ್ಯ ಪ್ರದೇಶದಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave A Reply