ಡಿ.10ರ ರಾತ್ರಿ 12 ಗಂಟೆಯ ತನಕ ಮದ್ಯ ಮಾರಾಟ, ಸಾಗಾಣಿಕೆ ನಿಷೇಧ

Share the Article

ಮಂಗಳೂರು : ರಾಜ್ಯ ವಿಧಾನ ಪರಿಷತ್ತಿಗೆ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ದ್ವೈವಾರ್ಷಿಕ ಚುನಾವಣೆಗೆ ಇದೇ ಡಿ.10 ರಂದು ಮತದಾನ ನಡೆಯಲಿದೆ.

ಈ ಹಿನ್ನಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಟಿಯಿಂದ ಈಗಾಗಲೇ ಹೊರಡಿಸಿದ ಆದೇಶವನ್ನು ಮಾರ್ಪಡಿಸಿ ಡಿ.8ರ ಸಂಜೆ 4 ಗಂಟೆಯಿಂದ ಡಿ.10ರ ಮಧ್ಯರಾತ್ರಿ 12 ಗಂಟೆಯವರೆಗೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮದ್ಯ ಮುಕ್ತದಿನಗಳೆಂದು ಘೋಷಿಸಿ ಎಲ್ಲಾ ವಿಧದ ಮದ್ಯದಂಗಡಿಗಳನ್ನು ಮುಚ್ಚುವಂತೆ ಇತ್ಯಾದಿ ಅಬಕಾರಿ ಪದಾರ್ಥಗಳ ಸಾಗಾಣಿಕೆ, ಶೇಕರಣೆ, ತಯಾರಿಕೆ, ಸರಬರಾಜು ಹಾಗೂ ಮಾರಾಟವನ್ನು ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ಆದೇಶ ಹೊರಡಿಸಿದ್ದಾರೆ.

Leave A Reply