Home Karnataka State Politics Updates ಇಂದು ವಿಧಾನ ಪರಿಷತ್ತಿನ 25 ಸ್ಥಾನಗಳಿಗೆ ಚುನಾವಣೆ | ಮತ ಚಲಾಯಿಸಿದ ಸಂಸದ ನಳಿನ್ ಕುಮಾರ್...

ಇಂದು ವಿಧಾನ ಪರಿಷತ್ತಿನ 25 ಸ್ಥಾನಗಳಿಗೆ ಚುನಾವಣೆ | ಮತ ಚಲಾಯಿಸಿದ ಸಂಸದ ನಳಿನ್ ಕುಮಾರ್ ಕಟೀಲ್, ಸಚಿವ ಅಂಗಾರ, ಶಾಸಕ ಹರೀಶ್ ಪೂಂಜಾ

Hindu neighbor gifts plot of land

Hindu neighbour gifts land to Muslim journalist

ವಿಧಾನ ಪರಿಷತ್ತಿನ 20 ಕ್ಷೇತ್ರಗಳ 25 ಸ್ಥಾನಗಳಿಗೆ ಇಂದು ಚುನಾವಣೆ ನಡೆಯುತ್ತಿದೆ. ಬೆಳಗ್ಗೆ 8ರಿಂದ ಮತದಾನ ಆರಂಭಗೊಂಡಿದ್ದು ಎಲ್ಲೆಡೆ ಬಿರುಸಿನ ಮತದಾನ ನಡೆಯುತ್ತಿದೆ. ಆಯಾ ಕ್ಷೇತ್ರಗಳ ಶಾಸಕರು, ಲೋಕಸಭೆ ಮತ್ತು ರಾಜ್ಯಸಭೆ ಸದಸ್ಯರು, ಪಟ್ಟಣ ಪಂಚಾಯತ್, ನಗರಸಭೆ ಹಾಗೂ ಗ್ರಾಮ ಪಂಚಾಯತ್ ಸದಸ್ಯರು ಈ ಮತದಾನದ ಹಕ್ಕನ್ನು ಹೊಂದಿದ್ದಾರೆ.

ಸಂಸದರಾದ ನಳೀನ್ ಕುಮಾರ್ ಕಟೀಲ್ ಅವರು ಮಂಗಳೂರು ಮಹಾನಗರ ಪಾಲಿಕೆ ಕಚೇರಿಯ ಮತಗಟ್ಟೆಯಲ್ಲಿ ಮತದಾನ ಮಾಡಿದರು. ಸಚಿವ ಎಸ್.ಅಂಗಾರ ಅವರು ಸುಳ್ಯ ನಗರ ಪಂಚಾಯತ್ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.

ಹಾಗೆಯೇ ಶಾಸಕ ಹರೀಶ್ ಪೂಂಜ ರವರು ಬೆಳ್ತಂಗಡಿ ಪಟ್ಟಣ ಪಂಚಾಯತದಲ್ಲಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದರು. ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ರಜನಿ ಕುಡ್ವ, ಉಪಾಧ್ಯಕ್ಷ ಜಯಾನಂದ ಗೌಡ ಹಾಗೂ ಪಟ್ಟಣ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದು, ಮತದಾನವನ್ನು ಮಾಡಿದರು.