18 ನೇ ವಯಸ್ಸಿಗೆ ಪ್ರಧಾನಿಯನ್ನೇ ಆಯ್ಕೆ ಮಾಡುವ ಹಕ್ಕಿರುವಾಗ, ಹೆಣ್ಣಿಗೆ ಬಾಳಸಂಗಾತಿಯನ್ನು ಆಯ್ಕೆ ಮಾಡುವ ಹಕ್ಕಿಲ್ಲ ಏಕೆ??- ಸಂಸದ ಓವೈಸಿ ಪ್ರಶ್ನೆ

ಕೇಂದ್ರ ಸರ್ಕಾರ ಕೆಲದಿನಗಳ ಹಿಂದೆಯಷ್ಟೇ ಹೆಣ್ಣುಮಕ್ಕಳ ಮದುವೆಯ ವಯಸ್ಸನ್ನು 18ರಿಂದ 25ಕ್ಕೆ ಏರಿಕೆ ಮಾಡಿದೆ. ಇದಕ್ಕೆ ದೇಶದಲ್ಲೆಡೆ ಶ್ಲಾಘನೆ ವ್ಯಕ್ತವಾಗುತ್ತಿದ್ದೆಯಾದರೂ, ಕೆಲವು ಟೀಕೆಗಳು ಇದೀಗ ಕೇಳಿಬರುತ್ತಿದೆ. 18ನೇ ವಯಸ್ಸಿಗೆ ಹೆಣ್ಣುಮಕ್ಕಳು ಪ್ರಧಾನಿಯನ್ನು ಆಯ್ಕೆ ಮಾಡುವ ಹಕ್ಕಿದೆ ಎಂದ ಮೇಲೆ, ಬಾಳ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವ ಹಕ್ಕು ಯಾಕಿಲ್ಲ ಎಂದು ಎಐಎಂಐಎಂ ಸಂಸದ ಅಸಾದುದ್ದೀನ್ ಓವೈಸಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಮಹಿಳೆಯರ ವಿವಾಹದ ಕನಿಷ್ಠ ವಯಸ್ಸನ್ನು 18 ರಿಂದ 21ಕ್ಕೆ ಹೆಚ್ಚಿಸುವ ಪ್ರಸ್ತಾವನೆಗೆ ಕೇಂದ್ರ ಸರ್ಕಾರ ಬುಧವಾರ ಒಪ್ಪಿಗೆ ಸೂಚಿಸಿದೆ. ಈ ಕುರಿತು ಮಾತನಾಡಿದ ಓವೈಸಿ, ಮದುವೆ ವಯಸ್ಸನ್ನು ಹೆಚ್ಚಿಸಿರುವ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನಿಲುವು ಪುರುಷ ಪ್ರಧಾನ ವ್ಯವಸ್ಥೆ ಬಗ್ಗೆ ಒಲವು ಹೊಂದಿದೆ ಎಂಬುದಕ್ಕೆ ಉತ್ತಮ ಉದಾಹರಣೆಯಾಗಿದೆ ಎಂದು ಕಿಡಿಕಾರಿದ್ದಾರೆ.

ಭಾರತೀಯ ನಾಗರಿಕ ತನಗೆ 18 ವರ್ಷ ತುಂಬಿದ ಮೇಲೆ ಯಾವುದೇ ಒಪ್ಪಂದಕ್ಕೆ ಸಹಿ ಹಾಕಬಹುದು, ಉದ್ಯಮ ನಡೆಸಬಹುದು, ಪ್ರಧಾನಿ ಹಾಗೂ ಸಂಸದರು, ಶಾಸಕರನ್ನೂ ಆಯ್ಕೆ ಮಾಡಬಹುದು. ಆದ್ದರಿಂದ ಕಾನೂನಿನಲ್ಲಿ ಈಗ ಇರುವ ಪುರುಷರ ಮದುವೆಯ ಕನಿಷ್ಠ ವಯಸ್ಸನ್ನು 21ರಿಂದ 18ಕ್ಕೆ ಇಳಿಸಬೇಕು ಎಂಬುದು ನನ್ನ ಅಭಿಪ್ರಾಯ ಎಂದು ತಿಳಿಸಿದ್ದಾರೆ.

ಭಾರತದಲ್ಲಿ ಬಾಲ್ಯ ವಿವಾಹಗಳು ಕಡಿಮೆಯಾಗಿರುವುದು ಕ್ರಿಮಿನಲ್ ಕಾನೂನಿನಿಂದಲ್ಲ, ಶಿಕ್ಷಣ ಮತ್ತು ಆರ್ಥಿಕ ಪ್ರಗತಿಯಿಂದಾಗಿ. ಹೀಗಿದ್ದೂ ಸುಮಾರು 1.2 ಕೋಟಿ ಮಕ್ಕಳ ಬಾಲ್ಯ ವಿವಾಹಗಳು ನಡೆದಿವೆ. ಈ ಸರ್ಕಾರ ಮಹಿಳೆಯರ ಏಳಿಗೆಗಾಗಿ ಏನನ್ನೂ ಮಾಡಿಲ್ಲ. 2005ರ ಹೊತ್ತಿಗೆ ಮಹಿಳಾ ಉದ್ಯೋಗಿಗಳ ಸಂಖ್ಯೆ ಶೇ.26ರಷ್ಟು ಇದ್ದದ್ದು, 2020ರ ವೇಳೆಗೆ ಶೇ.16ಕ್ಕೆ ಕುಸಿದಿದೆ ಎಂದು ಟೀಕಿಸಿದ್ದಾರೆ.

ವೈಯಕ್ತಿಕ ಮಾಹಿತಿ ರಕ್ಷಣಾ ಮಸೂದೆಯಲ್ಲಿ, ಮಾಹಿತಿಯನ್ನು ಹಂಚಿಕೊಳ್ಳಬಹುದಾದ ನಾಗರಿಕರಿಗೆ ಬಾಳಸಂಗಾತಿ ಆಯ್ಕೆ ಮಾಡಿಕೊಳ್ಳುವ ಹಕ್ಕಿಲ್ಲ. ಇದೆಂತಹ ಲಾಜಿಕ್? ಕೇಂದ್ರ ಸರ್ಕಾರ ತಪ್ಪು ಹೆಜ್ಜೆ ಇಟ್ಟಿದೆ ಎಂಬುದು ನನ್ನ ಭಾವನೆ. 21 ವರ್ಷ ದಾಟಿದ್ದರೆ ಅಂತಹವರಿಗೆ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಬೇಕು. ಖಾಸಗಿತನ ಮೂಲಭೂತ ಹಕ್ಕು ಎಂದು ಸುಪ್ರೀಂ ಕೋರ್ಟ್ ಕೂಡ ಹೇಳಿದೆ. ಯಾರನ್ನು ಮದುವೆಯಾಗಬೇಕು, ಯಾವಾಗ ಮಗುವನ್ನು ಪಡೆಯಬೇಕು ಎಂಬುದು ಸಹ ಆಯ್ಕೆಯ ವಿಚಾರವಾಗಿದೆ. ಹೀಗಿದ್ದರೂ ಮಹಿಳೆಯರ ಸರ್ವಾಂಗೀಣ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಏನನ್ನೂ ಮಾಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅಮೆರಿಕದಲ್ಲಿ 14 ವಯಸ್ಸಿನವರೂ ಮದುವೆಯಾಗಲು ಅವಕಾಶ ಇದೆ. ಬ್ರಿಟನ್, ಕೆನಡಾ ದೇಶಗಳು ಮದುವೆ ಕನಿಷ್ಠ ವಯಸ್ಸನ್ನು 16 ವರ್ಷಕ್ಕೆ ನಿಗದಿಪಡಿಸಿವೆ ಎಂದು ಓವೈಸಿ ಉದಾಹರಣೆ ಸಹಿತ ವಿವರಿಸಿದ್ದಾರೆ.

Leave A Reply

Your email address will not be published.