Home News ಎಣ್ಮೂರು : ಶೌಚಾಲಯದ ಗೋಡೆ ಕುಸಿದು ಇಬ್ಬರು ಮಹಿಳೆಯರು ಸಾವು

ಎಣ್ಮೂರು : ಶೌಚಾಲಯದ ಗೋಡೆ ಕುಸಿದು ಇಬ್ಬರು ಮಹಿಳೆಯರು ಸಾವು

Hindu neighbor gifts plot of land

Hindu neighbour gifts land to Muslim journalist

ಕಡಬ : ಶೌಚಾಲಯದ ಹಳೆಯ ಗೋಡೆಯನ್ನು ಕೆಡವುತ್ತಿದ್ದ ವೇಳೆ ಮಣ್ಣಿನ ಇಟ್ಟಿಗೆಯ ಗೋಡೆ ಮೈಮೇಲೆ ಕುಸಿದು ಬಿದ್ದು ಕೆಲಸ ಮಾಡುತ್ತಿದ್ದ ಇಬ್ಬರು ಮಹಿಳೆಯರು ಮೃತಪಟ್ಟ ದಾರುಣ ಘಟನೆ ಇದೀಗ ಎಣ್ಮೂರು ಗ್ರಾಮದ ನರ್ಲಡ್ಕದಿಂದ ವರದಿಯಾಗಿದೆ.

ನರ್ಲಡ್ಕ ನಿವಾಸಿ ಹರೀಶ ನಾಯ್ಕ ಎಂಬವರ ಮನೆಯ ಹಳೆಯ ಶೌಚಾಲಯದ ಗೋಡೆ ಕೆಡಹುವ ವೇಳೆ ಈ ದುರ್ಘಟನೆ ನಡೆಯಿತು. ಹಳೆಯ ಟಾಯ್ಲೆಟ್ ಗೋಡೆಯನ್ನು ತೆಗೆದು ಹೊಸ ಕಟ್ಟಡ ಕಟ್ಟುವುದಕ್ಕಾಗಿ ಕೆಲಸ ಮಾಡಲಾಗುತ್ತಿತ್ತು.

ಇತರ ಕೆಲಸಗಾರರ ಜತೆ ಸಮೀಪದ ಮನೆಯ ಬೀಪಾತುಮ್ಮ ಮತ್ತು ನೆಬಿಸಾರವರು ಕಾಮಗಾರಿ ಕೆಲಸದಲ್ಲಿ ತೊಡಗಿದ್ದರು. ಆ ವೇಳೆ ಮಣ್ಣಿನ ಇಟ್ಟಿಗೆಯ ಗೋಡೆ ಇವರ ಮೇಲೆ ಕುಸಿದು ಬಿತ್ತು. ತಕ್ಷಣ ಅಲ್ಲಿದ್ದವರು ಇವರನ್ನು ಮಣ್ಣಿನ ರಾಶಿಯಿಂದ ಹೊರತೆಗೆದು ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸಿದರು.

ಆದರೆ ಕಾಣಿಯೂರು ತಲುಪುವಾಗ ಬೀಪಾತುಮ್ಮ(60) ರವರು ಕೊನೆಯುಸಿರೆಳೆದುದರಿಂದ ಅವರ ಮೃತ ದೇಹವನ್ನು ಹಿಂತಿರುಗಿ ನರ್ಲಡ್ಕಕ್ಕೆ ತರಲಾಗಿದೆ. ನೆಬಿಸ (45 ವರ್ಷ) ರವರನ್ನು ಪುತ್ತೂರಿನ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಆದರೆ ಆಸ್ಪತ್ರೆ ತಲುಪುವ ವೇಳೆಗೆ ಅವರು ಕೊನೆಯುಸಿರೆಳೆದಿದ್ದಾರೆಂದು ತಿಳಿದುಬಂದಿದೆ.