ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕ್ರೀಡಾಕೂಟ

Share the Article

ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಪತ್ರಕರ್ತರ ಕ್ರೀಡಾಕೂಟವನ್ನು ಮನಪಾ ಆಯುಕ್ತ ಅಕ್ಷಯ್ ಶ್ರೀಧರ್ ಉದ್ಘಾಟಿಸಿದರು.
ನೆಹರೂ ಮೈದಾನ ಬಳಿಯ ಫುಟ್ಬಾಲ್ ಮೈದಾನದಲ್ಲಿ ನಡೆಯುತ್ತಿರುವ ಕ್ರೀಡಾಕೂಟದಲ್ಲಿ ದ.ಕ. ಜಿಲ್ಲಾ ಕಬಡ್ಡಿ ಅಸೋಸಿಯೇಷನ್ ನ ಅಧ್ಯಕ್ಷ ಅಮರನಾಥ ರೈ, ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಪೂಜಾರಿ, ಕೆಐಒಸಿಎಲ್ ಸಾರ್ವಜನಿಕ ಸಂಪರ್ಕ ಅಧಿಕಾರಿ ಮುರುಗೇಶ್ , ಹಿರಿಯ ಪತ್ರಕರ್ತ ಮನೋಹರ ಪ್ರಸಾದ್, ಮಂಗಳೂರು ವಿಶ್ವವಿದ್ಯಾಲಯದ ಕ್ರೀಡಾ ವಿಭಾಗದ ಯತೀಶ್, ಪತ್ರಿಕಾ ಭವನ ಟ್ರಸ್ಟ್ ನ ಆರ್. ರಾಮಕೃಷ್ಣ, ಹಿರಿಯ ಪತ್ರಕರ್ತ ರವೀಂದ್ರ ಶೆಟ್ಟಿ, ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಮೊದಲಾದವರು ಉಪಸ್ಥಿತರಿದ್ದರು.
ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ಇಂದಾಜೆ ಸ್ವಾಗತಿಸಿದರು. ಹಿರಿಯ ಪತ್ರಕರ್ತ ಭಾಸ್ಕರ ರೈ ಕಟ್ಟ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Leave A Reply