ಡಿಸೆಂಬರ್ 31 ರಂದು ಸ್ತಬ್ಧವಾಗಲಿದೆ ಕರ್ನಾಟಕ !!| ಕರ್ನಾಟಕ ಬಂದ್ ಗೆ ಕರೆ ನೀಡಿದ ಕನ್ನಡಪರ ಸಂಘಟನೆಗಳು

Share the Article

ಎಂಇಎಸ್‌ ಸಂಘಟನೆ ನಿಷೇಧಿಸುವಂತೆ ಒತ್ತಾಯಿಸಿ ಡಿಸೆಂಬರ್‌ 31 ರಂದು ಕರ್ನಾಟಕ ಬಂದ್‌ಗೆ ಕನ್ನಡಪರ ಸಂಘಟನೆಗಳು ಕರೆ ನೀಡಿವೆ.

ಖಾಸಗಿ ಹೋಟೆಲ್‌ನಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ನೇತೃತ್ವದಲ್ಲಿ ಬುಧವಾರ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಡಿಸೆಂಬರ್ 31 ರಂದು ಬೆಳಿಗ್ಗೆ 6ರಿಂದ ಸಂಜೆ 6 ಗಂಟೆವರೆಗೆ ಕರ್ನಾಟಕ ಬಂದ್‌ ಆಗಲಿದೆ. ಬಂದ್‌ ದಿನ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಟೌನ್‌ಹಾಲ್‌ನಿಂದ ಬೃಹತ್‌ ಮೆರವಣಿಗೆ ನಡೆಯಲಿದೆ. ಹೋರಾಟಕ್ಕೆ ಚಲನಚಿತ್ರ ನಟರೂ ಬೆಂಬಲ ಸೂಚಿಸಲಿದ್ದಾರೆ.

Leave A Reply