ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ | ಕರ್ನಾಟಕ ನಗರ ಮೂಲ ಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

Share the Article

ಕರ್ನಾಟಕ ನಗರ ಮೂಲ ಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಒಟ್ಟು 30 ವಿವಿಧ ಹುದ್ದೆಗಳು ಖಾಲಿ ಇದ್ದು, ಪಿಯುಸಿ, ಪದವಿ, ಬಿಇ, ಬಿಕಾಂ, ಬಿಬಿಎಂ, ಎಂಬಿಎ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಡಿಸೆಂಬರ್ 15ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬೇಕು. ಡಿಸೆಂಬರ್ 31 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

ಸಂಸ್ಥೆ:
ಕರ್ನಾಟಕ ನಗರ ಮೂಲ ಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ

ಹುದ್ದೆಯ ಹೆಸರು:
ಎಂಜಿನಿಯರ್ ಸೇರಿ ವಿವಿಧ ಹುದ್ದೆಗಳು

ಒಟ್ಟು ಹುದ್ದೆಗಳು:
30

ವಿದ್ಯಾರ್ಹತೆ:
ಪಿಯುಸಿ, ಪದವಿ, ಬಿಇ, ಬಿಕಾಂ, ಬಿಬಿಎಂ, ಎಂಬಿಎ

ಉದ್ಯೋಗದ ಸ್ಥಳ:
ಕರ್ನಾಟಕ

ವೇತನ:
ಮಾಸಿಕ ₹ 31,637-1,08,852

ವಯೋಮಿತಿ:

ಅಭ್ಯರ್ಥಿಗಳು ಕನಿಷ್ಠ 25 ರಿಂದ ಗರಿಷ್ಠ 62 ವರ್ಷದೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯಯನ್ನು ನೀಡಲಾಗಿರುತ್ತದೆ.

ಆಯ್ಕೆ ಪ್ರಕ್ರಿಯೆ:

ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತ ನೇಮಕಾತಿಯ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ವಿದ್ಯಾರ್ಹತೆ ಮೆರಿಟ್, ಅನುಭವದ ಆಧಾರದ ಮೇಲೆ ಮೌಖಿಕ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಕೆ ವಿಧಾನ:
ಆನ್​​ಲೈನ್​​​

ಅರ್ಜಿ ಸಲ್ಲಿಕೆ ಆರಂಭ ದಿನಾಂಕ:
15/12/2021

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
31/12/2021

Leave A Reply