ಬೆಳ್ತಂಗಡಿ: ವೇಣೂರಿನಲ್ಲಿ ಅಕ್ರಮ ಮರಳುಗಾರಿಕೆ ಅಡ್ಡೆಗೆ ಬಂಟ್ವಾಳ ಎಎಸ್ಪಿ ದಾಳಿ

Share the Article

ಅಕ್ರಮವಾಗಿ ನಡೆಯುತ್ತಿದ್ದ ಮರಳುಗಾರಿಕೆ ಅಡ್ಡೆಗೆ ಬಂಟ್ವಾಳ ಎಎಸ್ಪಿ ದಾಳಿ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ಕೊಡಮಣಿ ಎಂಬಲ್ಲಿ ನಡೆದಿದೆ.

ಇಂದು ಮಧ್ಯಾಹ್ನ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಕೊಡಮಣಿ ಎಂಬಲ್ಲಿ ಫಲ್ಗುಣಿ ನದಿಯಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದಾಗ ಬಂಟ್ವಾಳ ಎಎಸ್ಪಿ ಶಿವಂಶು ರಾಜಪೂತ್ ಮತ್ತು ತಂಡ ದಾಳಿ ಮಾಡಿದ್ದಾರೆ.

ದಾಳಿ ವೇಳೆ ಒಂದು ದೋಣಿ ಮತ್ತು ಒಂದು ಟಿಪ್ಪರ್ ವಾಹನ ವಶಪಡಿಸಿಕೊಳ್ಳಲಾಗಿದ್ದು, ಹೆಚ್ಚಿನ ತನಿಖೆಗಾಗಿ ವೇಣೂರು ಠಾಣೆಗೆ ಹಸ್ತಾಂತರಿಸಲಾಗಿದೆ.

Leave A Reply