ಬೆಳ್ತಂಗಡಿ: ಅಡಿಕೆ ಮರದಿಂದ ಬಿದ್ದು ಗಾಯಗೊಂಡಿದ್ದ ಕೃಷಿಕ ಚಿಕಿತ್ಸೆ ಫಲಕಾರಿಯಾಗದೆ ಸಾವು

Share the Article

ಅಡಿಕೆ ಮರದಿಂದ ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದ ಪ್ರಗತಿಪರ ಕೃಷಿಕರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕಳೆದ ರಾತ್ರಿ ನಿಧನ ಹೊಂದಿದ ಘಟನೆ ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದಲ್ಲಿ ನಡೆದಿದೆ.

ಮರೋಡಿ ಗ್ರಾಮದ ಕಿಂಜಾಲು ಮನೆಯ ಶೇಖರ್ ಪೂಜಾರಿ (52) ಮೃತರು.

ಪ್ರಗತಿಪರ ಕೃಷಿಕರಾಗಿದ್ದ ಶೇಖರ್ ಪೂಜಾರಿಯವರು ಡಿ.11 ರಂದು ತಮ್ಮ ತೋಟದಲ್ಲಿ ಅಡಿಕೆ ಮರದಿಂದ ಅಡಿಕೆ ತೆಗೆಯುವ ಸಂದರ್ಭ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದಿದ್ದರು. ಅವರ ತಲೆಗೆ ಹಾಗೂ ಕುತ್ತಿಗೆಗೆ ಗಂಭೀರ ಸ್ವರೂಪದ ಗಾಯವಾಗಿದ್ದು, ತಕ್ಷಣ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೆ ಡಿ.26 ರ ಮಧ್ಯರಾತ್ರಿ ನಿಧನರಾಗಿದ್ದಾರೆ.

ಮೃತರು ಯುವವಾಹಿನಿ ಸಂಘಟನೆ ಹಾಗೂ ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಇವರು ಪತ್ನಿ ಗುಲಾಬಿ, ಇಬ್ಬರು ಮಕ್ಕಳಾದ ಪ್ರೀತಮ್, ಪ್ರಜ್ವಲ್ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Leave A Reply