ಉಡುಪಿ: ಎಂಜಿಎಂ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

Share the Article

ಪರ್ಕಳ ದೇವಿನಗರದ ನಿವಾಸಿ ಪ್ರಥಮ ಪಿಯುಸಿ ವಿದ್ಯಾರ್ಥಿನಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಸರಸ್ವತಿ (16) ಎಂದು ಗುರುತಿಸಲಾಗಿದೆ. ಧಾರಾವಾಡ ಮೂಲದ ವಿದ್ಯಾರ್ಥಿನಿ ತಂದೆ ತಾಯಿಯರೊಂದಿಗೆ ಪರ್ಕಳದ ದೇವಿನಗರದಲ್ಲಿ ವಾಸಿಸುತ್ತಿದ್ದರು. ಸರಸ್ವತಿ ಉಡುಪಿ ಎಂಜಿಎಂ ಕಾಲೇಜಿನಲ್ಲಿ ಪಿಯು ವ್ಯಾಸಂಗ ಮಾಡುತ್ತಿದ್ದರು.

ಇವರ ತಂದೆ – ತಾಯಿ ಕಟ್ಟಿಗೆ ಮಿಲ್ ನಲ್ಲಿ ಕೆಲಸ ಮಾಡಿಕೊಂಡಿದ್ದು , ನಿನ್ನೆ ತಂದೆ ಹಾಗೂ ತಾಯಿ ಕೆಲಸಕ್ಕೆ ತೆರಳಿದ ವೇಳೆ ಸರಸ್ವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಈ ಬಗ್ಗೆ ಮಣಿಪಾಲ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave A Reply