Home latest ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ ಸರ್ವೋಚ್ಛ ನ್ಯಾಯಾಲಯದ ನ್ಯಾಯಮೂರ್ತಿ ಅಬ್ದುಲ್ ನಜೀರ್

ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ ಸರ್ವೋಚ್ಛ ನ್ಯಾಯಾಲಯದ ನ್ಯಾಯಮೂರ್ತಿ ಅಬ್ದುಲ್ ನಜೀರ್

Hindu neighbor gifts plot of land

Hindu neighbour gifts land to Muslim journalist

ಭಾರತದ ಸರ್ವೋಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಅಬ್ದುಲ್ ನಜೀರ್ ಅವರು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಗಮನ ಸೆಳೆದಿದ್ದಾರೆ.

ಕುಕ್ಕೆ ಶ್ರೀ ಸುಬ್ರಹ್ಮಣ್ಯನ ಪವಿತ್ರ ಪೂಜೆಗಳಲ್ಲಿ ಒಂದಾದ ಆಶ್ಲೇಷ ಬಲಿ ಪೂಜೆಯನ್ನು ಅಬ್ದುಲ್ ನಜೀರ್ ಅವರು ಸಲ್ಲಿಸಿದರು. ಈ ವೇಳೆ ದೇವಸ್ಥಾನ ಮಂಡಳಿಯವರು ನ್ಯಾಯಮೂರ್ತಿಗಳಿಗೆ ವಿಶೇಷ ಗೌರವವನ್ನು ಸಲ್ಲಿಸಿದರು.

ಅಂದಹಾಗೆ ಅಬ್ದುಲ್ ನಜೀರ್ ಅವರು ಒಂದು ವಾರಗಳ ಕಾಲ ದಕ್ಷಿಣ ಕನ್ನಡ ಪ್ರವಾಸದಲ್ಲಿದ್ದಾರೆ. ನಿನ್ನೆ (ಡಿ.26) – 8 ಗಂಟೆ ಸುಮಾರಿಗೆ ಹೈದರಾಬಾದ್‌ನಿಂದ ಮಂಗಳೂರಿಗೆ ಆಗಮಿಸಿ, ಅಲ್ಲಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳಿ ವಾಸ್ತವ್ಯ ಹೂಡಿದರು. ನಾಳೆ (ಡಿ.28) ಕುಕ್ಕೆಯಿಂದ ಪುತ್ತೂರಿಗೆ ಆಗಮಿಸಿ, ಬಾರ್ ಅಸೋಸಿಯೇಷನ್ ಕಟ್ಟಡ ಉದ್ಘಾಟನೆ ಮಾಡಲಿದ್ದಾರೆ.

2022ರ ಜನವರಿ 1ರವರೆಗೂ ಕರಾವಳಿಯ ವಿವಿಧ ಕಾರ್ಯಕ್ರಮಗಳಲ್ಲಿ ಅಬ್ದುಲ್ ನಜೀರ್ ಅವರು ಭಾಗವಹಿಸಲಿದ್ದಾರೆ.