Home ದಕ್ಷಿಣ ಕನ್ನಡ ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ಒಟ್ಟು ಒಂದು ಲಕ್ಷಕ್ಕೂ ಅಧಿಕ ಮಕ್ಕಳಿಗೆ ಲಸಿಕೆ ನೀಡಲು ಕ್ಷಣಗಣನೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ಒಟ್ಟು ಒಂದು ಲಕ್ಷಕ್ಕೂ ಅಧಿಕ ಮಕ್ಕಳಿಗೆ ಲಸಿಕೆ ನೀಡಲು ಕ್ಷಣಗಣನೆ

Hindu neighbor gifts plot of land

Hindu neighbour gifts land to Muslim journalist

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ಸುಮಾರು ಒಂದು ಲಕ್ಷಕ್ಕೂ ಅಧಿಕ ಮಂದಿ 15ರಿಂದ 18 ವರ್ಷದೊಳಗಿನ ಮಕ್ಕಳಿಗೆ ಜ. 3ರಿಂದ ಕೋವಿಡ್‌ ಲಸಿಕೆ ನೀಡಲು ಪಟ್ಟಿ ಸಿದ್ಧಪಡಿಸಿ ಶಿಬಿರ ಆಯೋಜಿಸುವಂತೆ ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಅವರು ಜಿಲ್ಲಾ ಆರೋಗ್ಯ ಹಾಗೂ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಿಲ್ಲಾಧಿಕಾರಿಯವರು ತಮ್ಮ ಕಚೇರಿಯಲ್ಲಿ ಬುಧವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ 1,01,549 ಮಕ್ಕಳಿದ್ದು ಅವರಿಗೆ ಕೋವ್ಯಾಕ್ಸಿನ್‌ ಮಾತ್ರ ನೀಡಲಾಗುವುದು. ಆಯಾ ಶಾಲೆ-ಕಾಲೇಜುಗಳಲ್ಲಿ ಸ್ಥಳೀಯ ಪ್ರಾ.ಆ.ಕೇಂದ್ರದ ಲಸಿಕಾ ತಂಡದ ಮೂಲಕ ಲಸಿಕೆ ನೀಡಲು ಸಿದ್ಧತೆ ಮಾಡಿಕೊಳ್ಳಬೇಕು ಎಂದರು. ಆ ಸಂದರ್ಭದಲ್ಲಿ ಮಕ್ಕಳ ಕೋವಿಡ್‌ ಲಸಿಕಾಕರಣ ಕುರಿತು ಶಾಲಾ-ಕಾಲೇಜುಗಳಲ್ಲಿ ಪೋಷಕ-ಶಿಕ್ಷಕ ಸಮಿತಿಯ ಸಭೆ ಕರೆದು ಮಾಹಿತಿ ನೀಡುವಂತೆಯೂ ಸೂಚಿಸಿದರು.

ಕೋವಿಡ್‌ ಲಸಿಕೆಯ ಉಪಯುಕ್ತತೆಯ ಬಗ್ಗೆ ಸಮುದಾಯದಲ್ಲಿ ಜಾಗೃತಿ ಮೂಡಿಸುವಂತೆ ಹಾಗೂ ಮುಂದಿನ ದಿನಗಳಲ್ಲಿ 15ರಿಂದ 18 ವರ್ಷದೊಳಗಿನ ಮಕ್ಕಳಿಗೂ ಕೋವಿಡ್‌ ಲಸಿಕೆ ನೀಡುವ ಕಾರ್ಯಕ್ರಮವಿದ್ದು ಈ ಬಗ್ಗೆ ಪ್ರಚಾರ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಅವರು ಅಲ್ಪಸಂಖ್ಯಾಕರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಆಂಜನಪ್ಪ ಅವರಿಗೆ ಸೂಚಿಸಿದರು.

ಜಿ.ಪಂ. ಸಿಇಒ ಡಾ| ಕುಮಾರ್‌, ಅಪರ ಜಿಲ್ಲಾಧಿಕಾರಿ ಚನ್ನಬಸಪ್ಪ, ಡಿಎಚ್‌ಒ ಡಾ| ಕಿಶೋರ್‌ ಕುಮಾರ್‌, ಜಿಲ್ಲಾ ಆರ್‌ಸಿಎಚ್‌ ಅಧಿಕಾರಿ ಡಾ| ರಾಜೇಶ್‌, ಡಿಡಿಪಿಐ ಡಾ| ಮಲ್ಲೇಸ್ವಾಮಿ, ಕೋವಿಡ್‌ ನೋಡಲ್‌ ಅಧಿಕಾರಿ ಡಾ| ಅಶೋಕ್‌, ಮಂಗಳೂರು ತಾಲೂಕು ಆರೋಗ್ಯಾಧಿಕಾರಿ ಡಾ| ಸುಜಯ್‌, ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕಾರಿಗಳು, ತಾಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳು ಸಭೆಯಲ್ಲಿದ್ದರು.
ಜಿಲ್ಲಾ ವಕ್ಫ್ ಅಧಿಕಾರಿ ಅಬುಬಕ್ಕರ್‌ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.