ಅರಣ್ಯ ಇಲಾಖೆಯ ಸಿಬ್ಬಂದಿಯಿದ್ದ ವಾಹನದ ಮೇಲೆ ಕಾಡಾನೆ ದಾಳಿ | ವಾಹನವನ್ನು ನಜ್ಜುಗುಜ್ಜು ಮಾಡಿದ ಕಾಡಾನೆ

Share the Article

ಅರಣ್ಯ ಇಲಾಖೆಯ ಸಿಬ್ಬಂದಿಯಿದ್ದ ವಾಹನದ ಮೇಲೆಯೇ ಕಾಡಾನೆಯೊಂದು ದಾಳಿ ನಡೆಸಿದ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೇಗೂರು ಹೋಬಳಿ ಶಿವಕುಮಾರಪುರ ಬಳಿ ಇಂದು ಮುಂಜಾನೆ ನಡೆದಿದೆ.

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಓಂಕಾರ್ ಅರಣ್ಯ ವ್ಯಾಪ್ತಿಯಲ್ಲಿಂದು ಬೆಳಗ್ಗೆ 6:30ರ ವೇಳೆ ಘಟನೆ ನಡೆದಿದೆ. ಇಂದು ಮುಂಜಾನೆ ಶಿವಕುಮಾರಪುರ ಮಠ ಪ್ರದೇಶದಲ್ಲಿ ಕಾಡಾನೆ ಕಾಣಿಸಿಕೊಂಡಿದೆ. ಈ ಬಗ್ಗೆ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಅದರಂತೆ ತಕ್ಷಣ ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆಯ ಸಿಬ್ಬಂದಿಯ ವಾಹನದ ಮೇಲೆಯೇ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ವಾಹನವನ್ನು ಮಗುಚಿ ಹಾಕಿದ ಆನೆ ಅದನ್ನು ನಜ್ಜುಗುಜ್ಜು ಮಾಡಿದೆ. ಈ ವೇಳೆ ಅರಣ್ಯ ಸಿಬ್ಬಂದಿ ಯಾವುದೇ ಅಪಾಯಗಳಿಲ್ಲದೆ ಪಾರಾಗಿದ್ದಾರೆ.

Leave A Reply