ಉತ್ತರ ಪ್ರದೇಶದ ಕಾರ್ಮಿಕ ಸಚಿವ ರಾಜೀನಾಮೆ ಬೆನ್ನಲ್ಲೇ ಬಿಜೆಪಿ ತೊರೆದ ಮೂವರು ಶಾಸಕರು | ಸಮಾಜವಾದಿ ಪಕ್ಷದತ್ತ ಮುಖ ಮಾಡಿದ ಶಾಸಕರು

Share the Article

ಉತ್ತರ ಪ್ರದೇಶ ಕಾರ್ಮಿಕ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ಅವರು ಬಿಜೆಪಿ ಪಕ್ಷಕ್ಕೆ ವಿದಾಯ ಹೇಳಿದ ಕೆಲವು ಗಂಟೆಗಳಲ್ಲಿ ಮತ್ತೆ ಮೂವರು ಬಿಜೆಪಿ ಶಾಸಕರು ಬಿಜೆಪಿಗೆ ಗುಡ್ ಬೈ ಹೇಳಿದ್ದಾರೆ.

ತಿಲ್ಹಾರ್ ಶಾಸಕ ರೋಶನ್ ಲಾಲ್ ವರ್ಮಾ, ಬಿಲ್ಹೌರ್ ಶಾಸಕ ಭಗವತಿ ಪ್ರಸಾದ್ ಸಾಗರ್ ಮತ್ತು ತಿಂದವಾರಿ ಶಾಸಕ ಬ್ರಜೇಶ್ ಪ್ರಜಾಪತಿ ಅವರು ಬಿಜೆಪಿ ಪಕ್ಷವನ್ನು ತೊರೆದಿದ್ದಾರೆ.

ಸ್ವಾಮಿ ಪ್ರಸಾದ್ ಮೌರ್ಯ ಅವರಂತೆ, ರೋಶನ್ ಲಾಲ್ ವರ್ಮಾ ಕೂಡ ಈ ವರ್ಷದ ಫೆಬ್ರವರಿ ಮತ್ತು ಮಾರ್ಚ್‍ನಲ್ಲಿ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೂ ಮುನ್ನ ಸಮಾಜವಾದಿ ಪಕ್ಷಕ್ಕೆ ಸೇರಲು ನಿರ್ಧರಿಸಿದ್ದಾರೆ.

ಐದು ವರ್ಷಗಳಿಂದ ನಮ್ಮ ಮಾತಿಗೆ ಕಿಮ್ಮತ್ತು ನೀಡಲಿಲ್ಲ. ಆದ ಕಾರಣ ಈ ನಿರ್ಧಾರಕ್ಕೆ ಬರಲಾಯಿತು ಎಂದು ರೋಶನ್ ಲಾಲ್ ವರ್ಮಾ ಹೇಳಿದ್ದಾರೆ.

ರಾಜೀನಾಮೆ ನೀಡಿದ ಸ್ವಾಮಿ ಪ್ರಸಾದ್ ಮೌರ್ಯ, ಯೋಗಿ ಆದಿತ್ಯನಾಥ್ ಸರಕಾರ ದಲಿತ ಮತ್ತು ಹಿಂದುಳಿದವರನ್ನು ಕಡೆಗಣಿಸುತ್ತಿದೆ. ದಲಿತರು ಮತ್ತು ಹಿಂದುಳಿದವರ ಬಗ್ಗೆ ಸರಕಾರ ತೋರಿರುವ ಹೀನ ಧೋರಣೆಯೇ ನನ್ನ ರಾಜೀನಾಮೆಗೆ ಪ್ರಮುಖ ಕಾರಣ ಎಂದು ಹೇಳಿದ್ದಾರೆ

Leave A Reply