Home ದಕ್ಷಿಣ ಕನ್ನಡ ಮಂಗಳೂರು: ಮೊಬೈಲ್ ಕದ್ದು ಪರಾರಿಯಾಗಲು ಯತ್ನಿಸಿದ ಕಳ್ಳನನ್ನು ಸಿನಿಮೀಯ ಸ್ಟೈಲ್ ನಲ್ಲಿ ಬೆನ್ನಟ್ಟಿ ಹಿಡಿದ ಪೊಲೀಸ್...

ಮಂಗಳೂರು: ಮೊಬೈಲ್ ಕದ್ದು ಪರಾರಿಯಾಗಲು ಯತ್ನಿಸಿದ ಕಳ್ಳನನ್ನು ಸಿನಿಮೀಯ ಸ್ಟೈಲ್ ನಲ್ಲಿ ಬೆನ್ನಟ್ಟಿ ಹಿಡಿದ ಪೊಲೀಸ್ | ಪೊಲೀಸ್ ನ ಈ ಕಾರ್ಯಕ್ಕೆ ಸಾರ್ವಜನಿಕರಿಂದ ಶ್ಲಾಘನೆಗಳ ಮಹಾಪೂರ

Hindu neighbor gifts plot of land

Hindu neighbour gifts land to Muslim journalist

ಮೊಬೈಲ್ ಕದ್ದು ಪರಾರಿಯಾಗಲು ಯತ್ನಿಸುತ್ತಿದ್ದ ಕಳ್ಳನನ್ನು ಕಂಡ ಪೊಲೀಸ್ ಆತನನ್ನು ಸಿನಿಮೀಯ ಶೈಲಿಯಲ್ಲಿ ಬೆನ್ನಟ್ಟಿ ಕೇವಲ 10 ನಿಮಿಷದಲ್ಲಿ ಹಿಡಿದ ಘಟನೆ ಇಂದು ಮಂಗಳೂರಿನಲ್ಲಿ ನಡೆದಿದೆ.

ಪೊಲೀಸ್ ಅಧಿಕಾರಿಯನ್ನು ವರುಣ್ ಎಂದು ಗುರುತಿಸಲಾಗಿದೆ. ನೆಹರೂ ಮೈದಾನದಲ್ಲಿ ಮಲಗಿದ್ದ ವ್ಯಕ್ತಿಯೋರ್ವನ ಮೊಬೈಲ್ ಕದ್ದು ಪರಾರಿಯಾಗುತ್ತಿದ್ದನ್ನು ಕಂಡ ಸ್ಥಳೀಯರು ಹಾಗೂ ಮೊಬೈಲ್ ಕಳೆದುಕೊಂಡ ವ್ಯಕ್ತಿ ಬೆನ್ನಟ್ಟಿದ್ದಾರೆ. ಇದನ್ನು ಕಂಡ ಪೊಲೀಸ್ ಮೊಬೈಲ್ ಕದ್ದು ಪರಾರಿಯಾಗಲು ಯತ್ನಿಸಿದ ಕಳ್ಳನನ್ನು ಸಿನಿಮೀಯ ಶೈಲಿಯಲ್ಲಿ ಬೆನ್ನಟ್ಟಿ ಹಿಡಿದು, ಮತ್ತೋರ್ವನನ್ನು ವಶಕ್ಕೆ ಪಡೆದಿದ್ದಾರೆ.

ಈ ಘಟನೆಯ ವೀಡಿಯೋ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು, ಪೊಲೀಸ್ ಕಾರ್ಯಕ್ಕೆ ಜನರಿಂದ ಶ್ಲಾಘನೆ ವ್ಯಕ್ತವಾಗಿದೆ. ಘಟನೆಯ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.