Home News ಇನ್ನು ಮುಂದೆ 8 ಪ್ರಯಾಣಿಕರ ವಾಹನದಲ್ಲಿ 6 ಏರ್‌ಬ್ಯಾಗ್‌ ಕಡ್ಡಾಯ !! | ಹೊಸ ನಿಯಮ...

ಇನ್ನು ಮುಂದೆ 8 ಪ್ರಯಾಣಿಕರ ವಾಹನದಲ್ಲಿ 6 ಏರ್‌ಬ್ಯಾಗ್‌ ಕಡ್ಡಾಯ !! | ಹೊಸ ನಿಯಮ ಜಾರಿಗೆ ತಂದ ಕೇಂದ್ರ ಸರ್ಕಾರ

Hindu neighbor gifts plot of land

Hindu neighbour gifts land to Muslim journalist

ಇತ್ತೀಚೆಗೆ ರಸ್ತೆ ಸುರಕ್ಷತೆ ಬಗ್ಗೆ ಸರ್ಕಾರ ಒಂದಿಲ್ಲೊಂದು ಹೊಸ ನಿಯಮವನ್ನು ಜಾರಿಗೆ ತರುತ್ತಿದೆ. ಆದರೂ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಇದೀಗ 8 ಪ್ರಯಾಣಿಕರು ಪ್ರಯಾಣಿಸಬಹುದಾದ ವಾಹನದಲ್ಲಿ ಉತ್ಪಾದಕರು ಕನಿಷ್ಠ 6 ಏರ್‌ಬ್ಯಾಗ್‌ಗಳನ್ನು ಕಡ್ಡಾಯವಾಗಿ ಒದಗಿಸಬೇಕೆಂಬ ನಿಯಮವನ್ನು ಕೇಂದ್ರ ಸರ್ಕಾರ ಜಾರಿಗೆ ತರಲಿದೆ.

8 ಪ್ರಯಾಣಿಕರನ್ನು ಸಾಗಿಸುವ ಮೋಟಾರು ವಾಹನಗಳಲ್ಲಿ ಪ್ರಯಾಣಿಕರ ಸುರಕ್ಷತೆಯನ್ನು ಹೆಚ್ಚಿಸುವ ಸಲುವಾಗಿ ಈಗ ಕನಿಷ್ಠ 6 ಏರ್‌ಬ್ಯಾಗ್‌ಗಳನ್ನು ಕಡ್ಡಾಯಗೊಳಿಸುವ ಕರಡು ನಿಯಮವನ್ನು ನಾನು ಅನುಮೋದಿಸಿದ್ದೇನೆ ಎಂದು ಸಾರಿಗೆ ಸಚಿವ ನಿತಿನ್‌ ಗಡ್ಕರಿ ಟ್ವೀಟ್‌ ಮಾಡಿ ತಿಳಿಸಿದ್ದಾರೆ.

ಏರ್‌ಬ್ಯಾಗ್‌ ಕಡ್ಡಾಯಗೊಳಿಸಿದ್ದರಿಂದ ವಾಹನಗಳ ಬೆಲೆ 8-10 ಸಾವಿರ ರೂ. ಏರಿಕೆಯಾಗುವ ಸಾಧ್ಯತೆಯಿದೆ. ಈ ವರ್ಷದ ಅಕ್ಟೋಬರ್‌ನಿಂದಲೇ ಇದು ಜಾರಿಗೆ ಬರುವ ಸಾಧ್ಯತೆಯಿದೆ. ಜುಲೈ 1, 2019 ರಿಂದ ಡ್ರೈವರ್ ಏರ್‌ಬ್ಯಾಗ್ ಮತ್ತು ಜನವರಿ 1, 2022 ರಿಂದ ಮುಂಭಾಗದ ಸಹ ಪ್ರಯಾಣಿಕನ ಏರ್‌ಬ್ಯಾಗ್‌ ಅನ್ನು ಸರ್ಕಾರ ಈಗಾಗಲೇ ಕಡ್ಡಾಯಗೊಳಿಸಿದೆ. ಈಗ ಎಂ1 ವಾಹನದ ಮುಂಭಾಗ ಮತ್ತು ಹಿಂಭಾಗದ ಎರಡೂ ವಿಭಾಗಗಳಲ್ಲಿ ಕುಳಿತಿರುವ ಪ್ರಯಾಣಿಕರಿಗೆ ನಾಲ್ಕು ಹೆಚ್ಚುವರಿ ಏರ್‌ಬ್ಯಾಗ್‌ ಕಡ್ಡಾಯಗೊಳಿಸಲಾಗಿದೆ.

ಸುರಕ್ಷತಾ ವೈಶಿಷ್ಟ್ಯಗಳ ವಿಷಯ ಬಂದಾಗ ಜಾಗತಿಕ ಕಂಪನಿಗಳ ಕಾರಿಗೆ ಹೋಲಿಸಿದರೆ ಭಾರತದ ಕಂಪನಿಗಳ ಕಾರು ಹಿಂದೆ ಉಳಿದಿವೆ. ಜಾಗತಿಕ ಕಂಪನಿಗಳು ಬೇರೆ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದ ಕಾರುಗಳನ್ನು ಭಾರತದಲ್ಲಿ ಬಿಡುಗಡೆ ಮಾಡುವ ವೇಳೆ ಪ್ರಮುಖ ಸುರಕ್ಷತಾ ವೈಶಿಷ್ಟ್ಯಗಳನ್ನು ನೀಡುವುದಿಲ್ಲ.

ಬಡವರು ಖರೀದಿಸುವ ಸಣ್ಣ ಕಾರುಗಳಲ್ಲಿ ಏರ್‌ಬ್ಯಾಗ್‌ ಇರುವುದಿಲ್ಲ. ಆದರೆ ಶ್ರೀಮಂತರು ಖರೀದಿಸುವ ಕಾರುಗಳಲ್ಲಿ ಏರ್‌ಬ್ಯಾಗ್‌ ನೀಡಲಾಗುತ್ತದೆ. ಈ ರೀತಿಯ ತಾರತಮ್ಯ ಯಾಕೆ ಎಂದು ಸಚಿವರು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.