Home ದಕ್ಷಿಣ ಕನ್ನಡ ಪುತ್ತೂರು : ಶ್ರೀ ಮಹಾಲಿಂಗೇಶ್ವರ ದೇವಳದಲ್ಲಿ ಅಷ್ಟಮಂಗಲ ಪ್ರಶ್ನಾಚಿಂತನೆಯು ಜನವರಿ 17ರಿಂದ ಪುನರಾರಂಭ

ಪುತ್ತೂರು : ಶ್ರೀ ಮಹಾಲಿಂಗೇಶ್ವರ ದೇವಳದಲ್ಲಿ ಅಷ್ಟಮಂಗಲ ಪ್ರಶ್ನಾಚಿಂತನೆಯು ಜನವರಿ 17ರಿಂದ ಪುನರಾರಂಭ

Hindu neighbor gifts plot of land

Hindu neighbour gifts land to Muslim journalist

ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಳದಲ್ಲಿ ಅಲ್ಪವಿರಾಮ ನೀಡಲಾಗಿದ್ದ ಈಗಾಗಲೆ 14 ದಿನಗಳ ಪ್ರಶ್ನಾಚಿಂತನಾ ಕಾರ್ಯಕ್ರಮ ಜನವರಿ ತಿಂಗಳ 17 ರಿಂದ 5 ದಿನಗಳ ಕಾಲ ನಡೆಯಲಿದೆ. ಶ್ರೀ ಮಹಾಲಿಂಗೇಶ್ವರ ಸಭಾಭವನದಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮದಲ್ಲಿ ಭಗವದ್ಭಕ್ತರು ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಬೇಕೆಂದು ಆಡಳಿತ ಮಂಡಳಿಯ ಅಪೇಕ್ಷೆ.

ಕೊವಿಡ್ 19ರ ಸರಕಾರದ ನಿಯಮಾನುಸಾರ ಊಟೋಪಚಾರಗಳಿಗೆ ಅವಕಾಶವಿರುವುದಿಲ್ಲ ಹಾಗೂ ಭಾಗವಹಿಸುವ ಎಲ್ಲಾ ಭಗವದ್ಭಕ್ತರು ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಆಡಳಿತ ಸಮಿತಿಯ ಅಧ್ಯಕ್ಷರು ಕೇಶವ ಪ್ರಸಾದ್ ಮುಳಿಯ ಹಾಗು ಕಾರ್ಯನಿರ್ವಾಹಕ ಅಧಿಕಾರಿ ನವೀನ್ ಕುಮಾರ್ ಭಂಡಾರಿ ಯವರು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.