Home latest ಬೆಂಗಳೂರಿನಲ್ಲಿ ಜನವರಿ 31ರವರೆಗೆ ನಿಷೇಧಾಜ್ಞೆ ಜಾರಿ !! | 144 ಸೆಕ್ಷನ್ ವಿಸ್ತರಿಸಿ ಆದೇಶ ಹೊರಡಿಸಿದ...

ಬೆಂಗಳೂರಿನಲ್ಲಿ ಜನವರಿ 31ರವರೆಗೆ ನಿಷೇಧಾಜ್ಞೆ ಜಾರಿ !! | 144 ಸೆಕ್ಷನ್ ವಿಸ್ತರಿಸಿ ಆದೇಶ ಹೊರಡಿಸಿದ ಪೊಲೀಸ್ ಆಯುಕ್ತರು

Hindu neighbor gifts plot of land

Hindu neighbour gifts land to Muslim journalist

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಜನವರಿ 31ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ನಗರದಲ್ಲಿ ಸೆಕ್ಷನ್ 144 ಸೆಕ್ಷನ್ ವಿಸ್ತರಣೆ ಮಾಡಿ ಇಂದು ಸಂಜೆ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.

ಜನವರಿ 31 ರವರೆಗೆ 144 ಸೆಕ್ಷನ್ ವಿಸ್ತರಣೆ ಮಾಡಿದ್ದಾರೆ. ರಾತ್ರಿ ಅಷ್ಟೇ ಅಲ್ಲ ಡೇ ಟೈಂನಲ್ಲಿಯೂ ನಗರದಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ. 144 ಸೆಕ್ಷನ್ ವೇಳೆ ಯಾವುದೇ ರ್ಯಾಲಿ, ಪ್ರತಿಭಟನೆ, ಸಭೆ ಹಾಗೂ ಸಮಾರಂಭಗಳಿಗೆ ಅವಕಾಶ ಇಲ್ಲ ಎಂದು ತಿಳಿಸಿದರು.

ಇಷ್ಟು ಮಾತ್ರವಲ್ಲದೆ ಐದು ಜನಕ್ಕಿಂತ ಹೆಚ್ಚು ಮಂದಿ ಗುಂಪು ಕೂಡದಂತೆ ಆದೇಶದಲ್ಲಿ ಉಲ್ಲೇಖಿಸಿದ್ದಾರೆ. ಒಂದು ವೇಳೆ ಈ ಆದೇಶ ಉಲ್ಲಂಘಿಸಿದರೆ ಎನ್ ಡಿಎಂಎ ಆಕ್ಟ್ ಅಡಿ ಕಾನೂನು ಕ್ರಮ ಜರಗಿಸಲಾಗುವುದು ಎಂದು ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.