Home Breaking Entertainment News Kannada ಬಾಂಗ್ಲಾ ನಟಿ ನಾಪತ್ತೆ ಪ್ರಕರಣ : ಸೇತುವೆಯ ಬಳಿ ಗೋಣಿಚೀಲದಲ್ಲಿ ಮೃತದೇಹ ಪತ್ತೆ

ಬಾಂಗ್ಲಾ ನಟಿ ನಾಪತ್ತೆ ಪ್ರಕರಣ : ಸೇತುವೆಯ ಬಳಿ ಗೋಣಿಚೀಲದಲ್ಲಿ ಮೃತದೇಹ ಪತ್ತೆ

Hindu neighbor gifts plot of land

Hindu neighbour gifts land to Muslim journalist

ಬಾಂಗ್ಲಾದೇಶದ ಢಾಕಾದಲ್ಲಿ ಕೆಲ‌ದಿನಗಳ‌ ಹಿಂದೆ ನಾಪತ್ತೆಯಾಗಿದ್ದ ನಟಿ ರೈಮಾ ಇಸ್ಲಾಂ ಶಿಮು ಢಾಕಾದ ಹೊರವಲಯದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಆಕೆಯ ಶವ ಕಳೆದ ಸೋಮವಾರ ಕೆರಣಿಗಂಜ್ ನ ಹಜರತ್ ಪುರ ಸೇತುವೆಯ ಬಳಿ ಗೋಣಿಚೀಲದಲ್ಲಿ ಪತ್ತೆಯಾಗಿದೆ.

ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ ಸಲೀಮುಲ್ಲಾ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ( ಎಸ್ ಎಸ್ ಎಂಸಿಎಚ್) ಕಳುಹಿಸಲಾಗಿದ್ದು, ತನಿಖೆ ಮುಂದುವರಿದಿದೆ.

45 ವರ್ಷದ ನಟಿ 1998 ರಲ್ಲಿ ‘ ಬರ್ತ್ ಮನ್’ ಚಿತ್ರದ ಮೂಲಕ ಚಿತ್ರರಂಗ ಪ್ರವೇಶ ಮಾಡಿದ್ದರು. ಒಟ್ಟು 25 ಚಿತ್ರಗಳಲ್ಲಿ ಕೆಲಸ ಮಾಡಿದ್ದಾರೆ. ಬಾಂಗ್ಲಾದೇಶ ಚಲನಚಿತ್ರ ಕಲಾವಿದರ ಸಂಘದ ಸಹಾಯಕ ಸದಸ್ಯ ಕೂಡಾ ಆಗಿದ್ದರು ಈ ನಟಿ.

ಶಿಮು ನಾಪತ್ತೆಯಾದ ಹಿನ್ನೆಲೆಯಲ್ಲಿ ಅವರ ಸಂಬಂಧಿಕರು ಭಾನುವಾರ ಕಲಬಾಗನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಸ್ಥಳೀಯರು ಮಾಹಿತಿ ನೀಡಿದ ನಂತರ ಕೆರಣಿಗಂಜ್ ಮಾದರಿ ಠಾಣೆಯ ಪೊಲೀಸರ ತಂಡ ಮೃತದೇಹವನ್ನು ಹೊರತೆಗೆದಿದ್ದಾರೆ.