ಪತ್ನಿಯನ್ನು ಚುಡಾಯಿಸಿದ ಯುವಕನನ್ನು ಕೊಂದು ಸುಟ್ಟು ಹಾಕಿದ ಪತಿ!!

Share the Article

ಪತ್ನಿಯನ್ನು ಚುಡಾಯಿಸುತ್ತಿದ್ದ ಯುವಕನೊಬ್ಬನನ್ನು ಮಹಿಳೆಯ ಪತಿಯೇ ಕೊಂದು ಸುಟ್ಟುಹಾಕಿದ ಘಟನೆ ಜಿಲ್ಲೆಯ ಗೌರಿಬಿದನೂರು ಕಂಬಾಲಹಳ್ಳಿಯಲ್ಲಿ ನಡೆದಿದೆ. ಮೃತ ಯುವಕನ್ನು ಶಂಕರ್ ಎಂದು ಗುರುತಿಸಲಾಗಿದೆ.

ಮೃತ ಯುವಕ ಕಳೆದ ಕೆಲ ತಿಂಗಳುಗಳಿಂದ ಆರೋಪಿ ಅಶೋಕ್ ಎಂಬಾತನ ಪತ್ನಿಯನ್ನು ಚುಡಾಯಿಸುತ್ತಿದ್ದ ಎನ್ನಲಾಗಿದ್ದು, ಇದರಿಂದ ಕೋಪಗೊಂಡ ಅಶೋಕ್ ಶಂಕರ್ ನನ್ನು ಕೊಂದು ಸುಟ್ಟು ಹಾಕಿದ್ದಾನೆ. ಸದ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮಂಚೇನಹಳ್ಳಿ ಗ್ರಾಮಾಂತರ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.

Leave A Reply