ಕಾರ್ಕಳ:ಕಾರು ಹಾಗೂ ಆಟೋ ನಡುವೆ ಭೀಕರ ಅಪಘಾತ|ಆಟೋ ಚಾಲಕ ಸ್ಥಳದಲ್ಲೇ ಸಾವು

ಕಾರ್ಕಳ: ಮಿಯ್ಯಾರು ಚರ್ಚಿನ ಬಳಿ ಕಾರು ಹಾಗೂ ಆಟೋ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ, ಓರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಬೆಳಗ್ಗೆ ನಡೆದಿದೆ.

ಮೃತರು
ಘಟನೆಯಲ್ಲಿ ಆಟೋ ಚಾಲಕ ಚಂದ್ರಶೇಖರ ಸಾವನ್ನಪ್ಪಿದ್ದು,ಅವರ ಸಹೋದರ ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಮೃತರ ಸಹೋದರರಿಗೆ ಅನಾರೋಗ್ಯ ಇದ್ದ ಕಾರಣ ಆಸ್ಪತ್ರೆಗೆ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದ್ದು,ಅಪಘಾತದ ರಭಸಕ್ಕೆ ಆಟೋ ಸಂಪೂರ್ಣ ನಜ್ಜುಗುಜ್ಜಾಗಿದೆ.ಕಾರಿನ ಮುಂಭಾಗಕ್ಕೆ ಹಾನಿಯಾಗಿದ್ದು,ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.ಕಾರ್ಕಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.