ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಮೊಮ್ಮಗಳು ಆತ್ಮಹತ್ಯೆ

Share the Article

ಬೆಂಗಳೂರು: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಮೊಮ್ಮಗಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ಬಿ ಎಸ್ ವೈ ಎರಡನೇ ಪುತ್ರಿ ಪದ್ಮಾವತಿ ಮಗಳು ಸೌಂದರ್ಯ (30) ಆತ್ಮಹತ್ಯೆಗೆ ಶರಣಾಗಿದ್ದು,ವಸಂತನಗರದಲ್ಲಿರುವ ಮೌಂಟ್ ಕಾರ್ಮೆಲ್ ಕಾಲೇಜು ಬಳಿಯ ಫ್ಲ್ಯಾಟ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸೌಂದರ್ಯ ಅವರು, ಎಮ್.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ವೈದ್ಯ ವೃತ್ತಿ ಮಾಡಿಕೊಂಡಿದ್ದು,2018 ರಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾದ ಮರಿಸ್ವಾಮಿ ಅಣ್ಣನ ಮಗ ಡಾ.ನೀರಜ್ ಅವರನ್ನು ಸೌಂದರ್ಯ ಮದುವೆಯಾಗಿದ್ದರು. ಮೃತ ಸೌಂದರ್ಯ ಅವರಿಗೆ ಒಂದು ಮಗು ಇದೆ.

ಇವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.ಕೌಟುಂಬಿಕ ವಿಷಯವಾಗಿ ಮನಸ್ಸಿಗೆ ಹಚ್ಚಿಕೊಂಡಿದ್ದರು ಎಂಬ ಹೇಳಿಕೆಗಳೂ ಸ್ಥಳೀಯವಾಗಿ ಹರಿದಾಡುತ್ತಿದ್ದು, ಪೊಲೀಸ್ ತನಿಖೆಯ ನಂತರದಲ್ಲಿ ಸಾವಿಗೆ ನಿಖರ ಕಾರಣ ತಿಳಿದುಬರಬೇಕಿದೆ.

ಸೌಂದರ್ಯ ಅವರ ಪತಿ ನೀರಜ್ ಆಸ್ಪತ್ರೆಯಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ ಆಗಿದ್ದಾರೆ. ಬೆಳಿಗ್ಗೆ 8 ಗಂಟೆಗೆ ಕೆಲಸಕ್ಕೆ ಹೋಗಿದ್ದರು. 10 ಗಂಟೆಯ ಸುಮಾರಿಗೆ ಸೌಂದರ್ಯ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆ ಕೆಲಸದವರು ಬಂದಾಗ ಬಾಗಿಲು ತೆಗೆಯದಿದ್ದಾಗ ಸೌಂದರ್ಯ ಪತಿ ಡಾ‌ ನೀರಜ್ ಗೆ ಕೆಲಸದವರು ಫೋನ್ ಮಾಡಿದ್ದರು. ನಂತರ ಈ ಪ್ರಕರಣ ಬೆಳಕಿಗೆ ಬಂದಿದೆ.ಹೈಗ್ರೌಂಡ್ಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು,ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ಮೃತದೇಹ ರವಾನೆ ಮಾಡಲಾಗಿದೆ

Leave A Reply