ಮಂಗಳೂರು : ಗುರುಪುರ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ನ ಆಡಳಿತಾಧಿಕಾರಿ ಆತ್ಮಹತ್ಯೆ

Share the Article

ಕುಪ್ಪೆಪದವು : ಗುರುಪುರ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ನ ಆಡಳಿತಾಧಿಕಾರಿ ನಾಗರಾಜ್ ರಾವ್ ( 58) ಆತ್ಮಹತ್ಯೆಗೆ ಶರಣಾಗಿದ್ದಾರೆ.

ಗುರುವಾರ ರಾತ್ರಿ ವೇಳೆ ಮನೆಯ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇದನ್ನು ಕಂಡ ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ಅಷ್ಟರಲ್ಲೇ ರಾವ್ ಅವರು ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ.

ಬ್ಯಾಂಕ್ ಗೆ ಸಂಬಂಧಪಟ್ಟ ವಿಚಾರದಲ್ಲಿ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಇವರು ವಾಮಂಜೂರು ತಿರುವೈಲು ತಾರಿಗುಡ್ಡೆ ನಿವಾಸಿಯಾಗಿದ್ದಾರೆ.

Leave A Reply