ವಿಧಾನಸಭೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಉಪನಾಯಕರಾಗಿ ಯು ಟಿ ಖಾದರ್ ನೇಮಕ

Share the Article

ವಿಧಾನಸಭೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಉಪನಾಯಕರಾಗಿ ಕಾಂಗ್ರೆಸ್ ನಾಯಕ‌ ಯು ಟಿ ಖಾದರ್ ಅವರನ್ನು ಆಯ್ಕೆ ಮಾಡಲಾಗಿದೆ.

ಕಾಂಗ್ರೆಸ್ ಪಕ್ಷದ ಶಾಸಕಾಂಗ ನಾಯಕರಾಗಿ ಹಾಗೂ ಪ್ರತಿಪಕ್ಷ ನಾಯಕರಾಗಿ ಸಿದ್ದರಾಮಯ್ಯ ಕಾರ್ಯನಿರ್ವಹಿಸುತ್ತಿದ್ದಾರೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಆದೇಶದ ಮೇಲೆ ಈ ನೇಮಕ ಮಾಡಲಾಗಿದೆ ಎಂದು ಅಖಿಲ ಭಾರತ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನೊಂದು ವರ್ಷದಲ್ಲಿ ರಾಜ್ಯ ವಿಧಾನಸಭೆ ಚುನಾವಣೆ ನಡೆಯಲಿರುವ ಕಾರಣ ಕಾರ್ಯದೊತ್ತಡ ನಿಭಾಯಿಸುವ ಉದ್ದೇಶದಿಂದ ಶಾಸಕಾಂಗ ಪಕ್ಷದ ಉಪನಾಯಕರ ನೇಮಕ ಮಾಡಲಾಗಿದೆ.

Leave A Reply